ಸಿದ್ದರಾಮಯ್ಯ ಅವರೇ ನಿಜವಾದ ಪಪ್ಪಿ-ಡಾ. ಸಿ.ಎನ್. ಅಶ್ವತ್ಥನಾರಾಯಣ
ರಾಮನಗರ ಜ.5 : ಮುಖ್ಯ ಮಂತ್ರಿ ಬಸರಾಜ ಬೊಮ್ಮಾಯಿ ಅವರಿಗೆ ನಾಯಿ ಮರಿ ಪದ ಬಳಕೆ ಮಾಡಿದ ವಿಚಾರಕ್ಕೆ ಸಂಬಂಧಿಸಿ `ಸಿದ್ದರಾಮಯ್ಯ ಅವರೇ ನಿಜವಾದ ಪಪ್ಪಿ’ ಎಂದು ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಆತ್ಮಸಾಕ್ಷಿ ಇರುವ ಯಾರೇ ಆದರೂ ಒಂದು ಕ್ಷಣ ಕಾಂಗ್ರೆಸ್ ನಲ್ಲಿ ಇರುವುದಿಲ್ಲ. ವಂಶಪಾರಂಪರ್ಯ ರಾಜಕಾರಣ ಇರುವ ಪಕ್ಷ ಕಾಂಗ್ರೆಸ್, ಇವರಿಗೆ ಆತ್ಮಸಾಕ್ಷಿ ಇದ್ದರೆ ಕೂಡಲೇ ಕಾಂಗ್ರೆಸ್ ಗೆ ರಾಜೀನಾಮೆ ನೀಡಬೇಕು ಎಂದು ಹೇಳಿದರು.
ಇದೇ ವೇಳೆ ಅವರು ಬೆಂಗಳೂರು- ಮೈಸೂರು ನೂತನ ಹೆದ್ದಾರಿಯಲ್ಲಿ ಆರು ಪ್ರಮುಖ ನಗರಗಳಿಗೆ ಪ್ರವೇಶ ಮತ್ತು ನಿರ್ಗಮನ ಟೋಲ್ ಗಳನ್ನು ನಿರ್ಮಿಸುವ ವ್ಯವಸ್ಥೆ ಸದ್ಯದಲ್ಲೇ ಆಗಲಿದೆ. ಹಾಗೂ ಬೆಂಗಳೂರಿನಿಂದ ಬಂಟಾಳ್ವವರೆಗೆ ಒಟ್ಟು 370 ಕಿ.ಮೀ.ಗೂ ಹೆಚ್ಚು ಉದ್ದದ ಹೆದ್ದಾರಿಯನ್ನು ಸಮಗ್ರವಾಗಿ ಅಭಿವೃದ್ಧಿ ಮಾಡಲಾಗುವುದು. ಮಂಗಳೂರು ವಿಮಾನ ನಿಲ್ದಾಣಕ್ಕೆ ಪರ್ಯಾಯವಾಗಿ ಈ ರಸ್ತೆ ಬೆಳೆಯಲಿದೆ ಎಂದರು.