ಶಿವಮೊಗ್ಗದ ನೂತನ ವಿಮಾನ ನಿಲ್ದಾಣ ಪ್ರಧಾನಿ ಮೋದಿಯಿಂದ ಲೋಕಾರ್ಪಣೆ

ಶಿವಮೊಗ್ಗ ಜ.9 : ನೂತನವಾಗಿ ಶಿವಮೊಗ್ಗದ ಸೋಗಾನೆ ಬಳಿ ನಿರ್ಮಾಣಗೊಳ್ಳುತ್ತಿರುವ ವಿಮಾನ ನಿಲ್ದಾಣವನ್ನು ಫೆ.12ಕ್ಕೆ ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ವಿಮಾನ ನಿಲ್ದಾಣದ ನಿರ್ಮಾಣ ಕಾಮಗಾರಿ ಮುಗಿಯುವ ಹಂತದಲ್ಲಿದೆ. ವಿಮಾನ ಹಾರಾಟಕ್ಕೆ ಎಲ್ಲಾ ರೀತಿಯ ಯೋಜನೆ ರೂಪಿಸಲಾಗಿದೆ. ಮುಂದಿನ ದಿನದಲ್ಲಿ ಈ ಭಾಗದ ಜನರು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದರು. ಹಾಗೂ ಜಂಗಮ ಸಮಾಜದ ಸಾಂಸ್ಕೃತಿಕ ಭವನಕ್ಕೆ 11 ಕೋಟಿ ಅನುದಾನ ಮಂಜೂರು ಮಾಡಲಾಗಿದೆ. ಶೀಘ್ರ ಕಾಮಗಾರಿ ಮುಗಿಸಿ, ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಸಲಹೆ ನೀಡಿದರು.

Leave a Reply

Your email address will not be published. Required fields are marked *

error: Content is protected !!