ಕಾರ್ಕಳ:ಪ್ರತ್ಯೇಕ ಪ್ರಕರಣ ಇಬ್ಬರು ಆತ್ಮಹತ್ಯೆ

ಕಾರ್ಕಳ ಜ.10 (ಉಡುಪಿ ಟೈಮ್ಸ್ ವರದಿ) : ತಾಲೂಕಿನಲ್ಲಿ ಅನಾರೋಗ್ಯದ ಕಾರಣದಿಂದ ಓರ್ವ ವ್ಯಕ್ತಿ ಹಾಗೂ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಎರಡು ಪ್ರತ್ಯೇಕ ಪ್ರಕರಣ ವರದಿಯಾಗಿದೆ.

ಲಾಜರಸ್ ಡಿಸೋಜ (78) , ಸುಮತಿ (56) ಆತ್ಮಹತ್ಯೆ ಮಾಡಿಕೊಂಡವರು.

ಕಾರ್ಕಳದ ಸೂಡ ಗ್ರಾಮದ ಪೆರ್ನಾಲು ಎಂಬಲ್ಲಿನ ನಿವಾಸಿ ಲಾಜರಸ್ ಡಿಸೋಜ ಎಂಬವರು 2 ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದರು, ಈ ಬಗ್ಗೆ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಆದರೆ ಇವರು ತಮಗಿದ್ದ ಅನಾರೋಗ್ಯದಿಂದ ಮನನೊಂದು ಜ.9 ರ ಬೆಳಿಗ್ಗೆಯಿಂದ ಸಂಜೆಯ ಅವಧಿಯಲ್ಲಿ ಸಮೀಪದ ಗಣೇಶ್ ಆಚಾರ್ಯ ಎಂಬುವವರ ಜಾಗದಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮತ್ತೊಂದೆಡೆ ಕಾರ್ಕಳದ ಮುಂಡ್ಕೂರು ಗ್ರಾಮದ ತಿಲಕ ನಗರದ ನಿವಾಸಿ ಸುಮತಿ (56) ಎಂಬವರು 10 ವರ್ಷದಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದು, ಈ ಬಗ್ಗೆ ಉಡುಪಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಗುಣಮುಖವಾಗದ ಕಾರಣ ಮನನೊಂದು ಜ.9 ರ ಸಂಜೆ ವೇಳೆ ಮನೆಯ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಎರಡೂ ಆತ್ಮಹತ್ಯೆ ಘಟನೆಗೆ ಸಂಬಂಧಿಸಿ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್‍ಎಸ್‍ಆರ್ ಸೆಕ್ಟರ್- 4, ಬೆಂಗಳೂರು.

Leave a Reply

Your email address will not be published. Required fields are marked *

error: Content is protected !!