ಕೋಟೇಶ್ವರ: ಫ್ಯಾನ್ಸಿ ಅಂಗಡಿಯಲ್ಲಿ ಬೆಂಕಿ ಅವಘಡ-ಲಕ್ಷ ರೂ. ನಷ್ಟ
ಕೋಟೇಶ್ವರ: ಕೋಟೇಶ್ವರದ ಪಟ್ಟಾಭಿ ದೇವಸ್ಥಾನದ ಸಮೀಪದ ಮುಖ್ಯ ರಸ್ತೆಯ ಪಕ್ಕದ ಮಹಾಲಕ್ಷ್ಮೀ ಕಂಗನ್ ಸ್ಟೋರ್ ನಲ್ಲಿ ಬೆಂಕಿ ಅವಘಡವಾಗಿ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ.
ಇಂದು ಮಧ್ಯಾಹ್ನ ಸುಮಾರು 2.45 ಸಂಭವಿಸಿದ್ದು ಅಂಗಡಿಯ ಮಾಲಕರು ಸಮೀಪದ ಕೋಟ ಶ್ರೀ ಅಮೃತೇಶ್ವರಿ ದೇವಸ್ಥಾನದ ಹಬ್ಬಕ್ಕೆ ತೆರಳಿದ್ದು ಅಂಗಡಿಯ ಬಾಗಿಲನ್ನು ಮುಚ್ಚಲಾಗಿತ್ತು. ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸ್ಥಳೀಯರು ಪಂಪ್ ಮೂಲಕ ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಆದರೆ ಅಂಗಡಿಯೊಳಗಿನ ಪ್ಲಾಸ್ಟಿಕ್ ಹಾಗೂ ನೈಲಾನ್ ವಸ್ತುಗಳಿಗೆ ಹಿಡಿದ ಬೆಂಕಿಯ ಕೆನ್ನಾಲಿಗೆಗೆ ಇಡೀ ಅಂಗಡಿ ಸುಟ್ಟು ಭಸ್ಮವಾಗಿದೆ. ಸ್ಥಳಕ್ಕೆ ಬಂದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು.
ಘಟನೆಯಲ್ಲಿ ಯಾವುದೇ ಯಾವುದೇ ರೀತಿಯ ಸಾವು ನೋವುಗಳು ಸಂಭವಿಸಿಲ್ಲ. ಶಾರ್ಟ್ ಸರ್ಕ್ಯೂಟ್ ನಿಂದ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.