ಗಂಗೊಳ್ಳಿ: ಮಾದಕ ವಸ್ತು ಸೇವನೆ – ಓರ್ವ ಯುವಕ ವಶ
ಗಂಗೊಳ್ಳಿ ಜ.10 (ಉಡುಪಿ ಟೈಮ್ಸ್ ವರದಿ) : ಮಾದಕ ವಸ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಯುವಕನನ್ನು ಗಂಗೊಳ್ಳಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಜಮಾಲುದ್ದಿನ್ (28) ಪೊಲೀಸರು ವಶಕ್ಕೆ ಪಡೆದ ಯುವಕ.
ಜಮಾಲುದ್ದಿನ್ ನನ್ನು ಗ್ರಾಮದ ತ್ರಾಸಿ ಪ್ರವಾಸಿ ಮಂದಿರದ ಬಳಿ ಮಾದಕ ವಸ್ತು ಸೇವಿಸಿರುವ ಅನುಮಾನದ ಮೇರೆಗೆ ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದರು. ಈತನ ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ಗಾಂಜಾ ಸೇವಿಸಿರುವುದು ದೃಢಪಟ್ಟಿದ್ದು, ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.