ಉಡುಪಿ: ಡಾ.ಟಿ.ಎಂ.ಎ.ಪೈ ಆಸ್ಪತ್ರೆಯಲ್ಲಿ ಜನರಲ್ ಹಾಗೂ ಜಠರರೋಗದ ಶಸ್ತ್ರಚಿಕಿತ್ಸಾ ಸೇವೆಗಳು ಲಭ್ಯ
ಉಡುಪಿ, ಜ.11 (ಉಡುಪಿ ಟೈಮ್ಸ್ ವರದಿ): ಕನ್ಸಲ್ಟೆಂಟ್ ಸರ್ಜನ್ ಮತ್ತು ಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ರೀತೇಶ್ ಆರ್ ಶೆಟ್ಟಿ ಅವರು ಉಡುಪಿಯ ಡಾ.ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ಕ್ಲಿನಿಕಲ್ ಮತ್ತು ಶಸ್ತ್ರಚಿಕಿತ್ಸಾ ಸೇವೆಗಳನ್ನು ಒದಗಿಸಲು ಪ್ರಾರಂಭಿಸಿದ್ದಾರೆ.
ಈ ಬಗ್ಗೆ ಪ್ರಕಟಣೆ ಮೂಲಕ ಮಾಹಿತಿ ಹಂಚಿಕೊಂಡಿರುವ ಡಾ.ಟಿ.ಎಂ.ಎ ಪೈ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಶಶಿಕಿರಣ್ ಉಮಾಕಾಂತ್ ಅವರು, ಡಾ. ರೀತೇಶ್ ಆರ್ ಶೆಟ್ಟಿ ಅವರು ಎಲ್ಲಾ ಕೆಲಸದ ದಿನಗಳಲ್ಲಿ ಬೆಳಿಗ್ಗೆ 9.00 ರಿಂದ ಸಂಜೆ 5.00 ರವರೆಗೆ ಪೂರ್ಣ ಸಮಯದ ಸಮಾಲೋಚನೆಗೆ ಲಭ್ಯವಿರುತ್ತಾರೆ. ಸಾರ್ವಜನಿಕರು ಇವರ ಸಮಾಲೋಚನೆ ಮತ್ತು ಶಸ್ತ್ರಚಿಕಿತ್ಸಾ ಸೌಲಭ್ಯಗಳನ್ನು ಉಪಯೋಗಿಸಲು ಅವರ ಅಪಾಯಿಂಟ್‍ಮೆಂಟ್ ಗಾಗಿ 7259032864 ಸಂಖ್ಯೆಯನ್ನು ಸಂಪರ್ಕಿಸುವಂತೆ ತಿಳಿಸಿದ್ದಾರೆ.
ಡಾ. ರೀತೇಶ್ ಆರ್ ಶೆಟ್ಟಿ ಅವರು ಕೋಲಾರದ ಶ್ರೀ ದೇವರಾಜ್ ಅರಸ್ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಮತ್ತು ದಾವಣಗೆರೆಯ ಜೆಜೆಎಂ ವೈದ್ಯಕೀಯ ಕಾಲೇಜಿನಲ್ಲಿ ಎಂಎಸ್ ಜನರಲ್ ಸರ್ಜರಿ ಮಾಡಿದ್ದಾರೆ. ಅವರು ತಮಿಳುನಾಡಿನ ಮದುರೈ ನಗರದ ಮೀನಾಕ್ಷಿ ಮಿಷನ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ತರಬೇತಿ ಪಡೆದ ನಂತರ ನವದೆಹಲಿಯ ವೈದ್ಯಕೀಯ ವಿಜ್ಞಾನಗಳ ರಾಷ್ಟ್ರೀಯ ಪರೀಕ್ಷಾ ಮಂಡಳಿಯಿಂದ ಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿಯಲ್ಲಿ (ಸೂಪರ್ ಸ್ಪೆಷಲೈಸೇಶನ್) ಡಿಎನ್‍ಬಿ ಪಡೆದಿದ್ದಾರೆ.