ಹೆಬ್ರಿ: ಅಡ್ಡ ಬಂದ ಹಸು, ಹೊಂಡಕ್ಕೆ ಬಿದ್ದ ಕಾರು-ಚಾಲಕ ಪಾರು
ಹೆಬ್ರಿ ಜ.11: ಅಡ್ಡ ಬಂದ ಹಸುವೊಂದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿಸ ಓಮ್ನಿ ಕಾರೊಂದು ಹೊಂಡಕ್ಕೆ ಬಿದ್ದ ಘಟನೆ ಹೆಬ್ರಿಯ ಎಸ್.ಆರ್ ಶಾಲೆಯ ಬಳಿ ನಡೆದಿದೆ.
ಘಟನೆಯಲ್ಲಿ ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಮಣಿಪಾಲದಿಂದ ಹರಿಹರ ಕಡೆಗೆ ಹೋಗುತ್ತಿದ್ದ ಓಮ್ನಿ ಕಾರು ಚಾಲಕ ರಸ್ತೆಯಲ್ಲಿ ಅಡ್ಡ ಬಂದ ಹಸುವಿಗೆ ವಾಹನ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ವಾಹನ ರಸ್ತೆಯ ಬದಿಯಲ್ಲಿದ್ದ ಹೊಂಡಕ್ಕೆ ಬಿದ್ದಿದೆ.