ಸುಂಕದಕಟ್ಟೆ: ಪಾಲಿಟೆಕ್ನಿಕ್ ಕಾಲೇಜಿನ ಕಳವು ಪ್ರಕರಣದ ಆರೋಪಿ ಪೊಲೀಸ್ ವಶಕ್ಕೆ

ಮಂಗಳೂರು: ನಗರದ ಸುಂಕದಕಟ್ಟೆ ಶ್ರೀ ನಿರಂಜನ ಸ್ವಾಮಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆದಿದ್ದ ಲಕ್ಷಾಂತರ ರೂಪಾಯಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೊಬ್ಬನನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.

ವಾಮಂಜೂರು ತಿರುವೈಲು ಗ್ರಾಮದ ನಿವಾಸಿ ಆರೀಫ್ (26) ಬಂಧಿತ ಆರೋಪಿ. ಈತ 2020 ರ ಡಿ.9 ರಂದು ಕಾಲೇಜಿನ ಕಚೇರಿಯ ಬೀಗ ಮುರಿದು ಕಪಾಟಿನಲ್ಲಿದ್ದ 5.41 ಲಕ್ಷ ರೂ. ಕಳವು ಮಾಡಿದ್ದ. 

ಇಷ್ಟೇ ಅಲ್ಲದೆ ಆರೋಪಿಯ ಮೇಲೆ ಈಗಾಗಲೇ ಕಳ್ಳತನ, ದರೋಡೆ, ಕೊಲೆ ಯತ್ನ ಹಾಗೂ ಎಟಿಎಂ ಕಳವಿಗೆ ಸಂಬಂಧಿಸಿದಂತೆ ಮೂಡುಬಿದಿರೆ ಠಾಣೆಯಲ್ಲಿ 7 ಪ್ರಕರಣಗಳು, ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ 4, ಕಾವೂರು ಹಾಗೂ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ 2, ಬಂಟ್ವಾಳ ನಗರ, ಗ್ರಾಮಾಂತರ ಹಾಗೂ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ ಸೇರಿ ಒಟ್ಟು 18 ಪ್ರಕರಣಗಳು ದಾಖಲಾಗಿವೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!