ಓಮನ್ ಬಿಲ್ಲವಾಸ್ ನ ನೂತನ ಅಧ್ಯಕ್ಷರಾಗಿ ಸುಜಿತ್ ಎಸ್. ಪಾಂಗಾಳ ಆಯ್ಕೆ

ಮಸ್ಕತ್ ಜ.13 : ಓಮನ್ ಬಿಲ್ಲವಾಸ್ ಇದರ 2023-24ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಅಧ್ಯಕ್ಷರಾಗಿ ಸುಜಿತ್ ಎಸ್. ಪಾಂಗಾಳ ಆಯ್ಕೆಯಾಗಿದ್ದಾರೆ.

ಜ.6 ರಂದು ಮಸ್ಕತಿನ ಅಜೈಬ ಗಾರ್ಡನ್ ಸಭಾಂಗಣದಲ್ಲಿ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಕಾರ್ಯಕ್ರಮ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ನೂತನ ಕಾರ್ಯಕಾರಿ ಸಮಿತಿಯ ಅಧ್ಯಕ್ಷರಾಗಿ ಸುಜಿತ್ ಎಸ್. ಪಾಂಗಾಳ ಹಾಗೂ ವಿವಿಧ ಪದಾಧಿಕಾರಿಗಳ ಆಯ್ಕೆ ನಡೆದಿದೆ.

ನೂತನ ಅಧಿಕಾರಿಗಳು ಬ್ರಹ್ಮಶ್ರೀ ನಾರಾಯಣ ಗುರುದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಹಿರಿಯರಾದ ರಾಮಕೃಷ್ಣ ಸುಜೀರ್ ಪ್ರಮಾಣ ವಚನ ಬೋಧಿಸಿ, ಆಶೀರ್ವಚನ ನೀಡಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಸ್ಥಾಪಕ ಸದಸ್ಯ ಡಾ. ಅಂಚನ್ ಸಿ.ಕೆ, ಆಯ್ಕೆ ಸಮಿತಿಯ ಕೃಷ್ಣಪ್ರಸಾದ್ ಮತ್ತು ಬಾಲಕೃಷ್ಣ ಆರ್. ಕೋಟ್ಯಾನ್ ಕಾಪು ಹಾಗೂ ವಿವಿಧ ಬಿಲ್ಲವ ಸಮಾಜದ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!