ಮಂಗಳೂರು: ಗಾಂಜಾ ಮರಾಟ ಮತ್ತು ಸೇವನೆ ಪ್ರಕರಣ: ವೈದ್ಯರಿಬ್ಬರ ಬಂಧನ: ಬಂಧಿತರ ಸಂಖ್ಯೆ 15ಕ್ಕೆ ಏರಿಕೆ
ಮಂಗಳೂರು ಜ.13 : ನಗರದ ಗಾಂಜಾ ಮರಾಟ ಮತ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ವೈದ್ಯರಿಬ್ಬರನ್ನು ಪೊಲೀಸರು ಬಂಧಿಸಿದ್ದು, ಈ ಮೂಲಕ ಪ್ರಕರಣದ ಬಂಧಿತರ ಸಂಖ್ಯೆ 15 ಕ್ಕೆ ಏರಿಕೆಯಾಗಿದೆ.
ನಗರದ ಪ್ರತಿಷ್ಠಿತ ಎರಡು ವೈದ್ಯಕೀಯ ಕಾಲೇಜುಗಳ ವೈದ್ಯರು ಭಾಗಿಯಾಗಿರುವ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣದ ತನಿಖೆಯನ್ನು ಮುಂದುವರಿಸಿರುವ ಪೊಲೀಸರು ಇದೀಗ ಮತ್ತೆ ಆಂಧ್ರಪ್ರದೇಶದ ಡಾ. ರಾಘವ ದತ್ತಾ(28) ಮತ್ತು ಬೆಂಗಳೂರು ನಿವಾಸಿ ಡಾ.ಬಾಲಾಜಿ (29) ಎಂಬ ಇಬ್ಬರನ್ನು ಬಂಧಿಸಿದ್ದಾರೆ.
10 ದಿನಗಳಲ್ಲಿ ಮಂಗಳೂರು ಕಮಿಶನರೇಟ್ ವ್ಯಾಪ್ತಿಯಲ್ಲಿ 6 ಪ್ರಕರಣಗಳಲ್ಲಿ 20ಕ್ಕೂ ಅಧಿಕ ಆರೋಪಿಗಳನ್ನು ಬಂಧಿಸಿ 1 ಕ್ವಿಂಟಾಲ್ ಗೂ ಅಧಿಕ ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರು ತಿಳಿಸಿದ್ದಾರೆ.