ಚೆಕ್ ಬೌನ್ಸ್ ಪ್ರಕರಣ: ನಿರ್ದೇಶಕ ಗುರು ಪ್ರಸಾದ್ ಬಂಧನ

ಬೆಂಗಳೂರು, ಜ.13 : ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿ ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಗುರು ಪ್ರಸಾದ್ ಅವರನ್ನು ಬೆಂಗಳೂರಿನ ಗಿರಿನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಶ್ರೀನಿವಾಸ್ ಹೆಸರಿನ ವ್ಯಕ್ತಿಗೆ ಹಣ ಕೊಡುವ ವಿಚಾರಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದ್ದು, ಗುರು ಪ್ರಸಾದ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿ ಗುರು ಪ್ರಸಾದ್ ಅವರನ್ನು ಬಂಧಿಸಿರುವ ಪೊಲೀಸರು ಅವರನ್ನು ಕೋರ್ಟ್ ಮುಂದೆ ಹಾಜರು ಪಡಿಸಲಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

Leave a Reply

Your email address will not be published. Required fields are marked *

error: Content is protected !!