ಬ್ರಹ್ಮಾವರ: ಜೀಪು ಡಿಕ್ಕಿ ಹೊಡೆದು ಪಾದಚಾರಿ ಮಹಿಳೆ ಮೃತ್ಯು
ಬ್ರಹ್ಮಾವರ ಜ.13 : ಜೀಪೊಂದು ಡಿಕ್ಕಿ ಹೊಡೆದು ರಸ್ತೆ ದಾಟು ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಮೃತಪಟ್ಟ ಘಟನೆ ಉಪ್ಪೂರು ಗ್ರಾಮದ ಕೆ.ಜಿ ರೋಡ್ ನ ಬಸ್ ನಿಲ್ದಾಣದ ಬಳಿ ನಡೆದಿದೆ.
ಜಯಲಕ್ಷ್ಮೀ ಭಟ್ ಮೃತಪಟ್ಟವರು.
ಇವರು ಇಂದು ಬೆಳಿಗ್ಗೆ ಬಸ್ಸ್ ನಿಲ್ದಾಣದ ಕಡೆಗೆ ಹೋಗಲು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಜೀಪನ್ನು ಚಲಾಯಿಸಿಕೊಂಡು ಬಂದ ಚಾಲಕ ಅಬ್ದುಲ್ ಮುತಾಲಿ ಎಂಬಾತ ಜಯಲಕ್ಷ್ಮೀ ಭಟ್ ಎಂಬವರಿಗೆ ಡಿಕ್ಕಿ ಹೊಡೆದಿದ್ದಾನೆ.
ಪರಿಣಾಮ ಜಯಲಕ್ಷ್ಮೀ ಭಟ್ ರವರು ರಸ್ತೆಗೆ ಬಿದ್ದು ತಲೆಗೆ ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋದಾಗ, ವೈದ್ಯಾಧಿಕಾರಿಯವರು ಜಯಲಕ್ಷ್ಮೀರವರನ್ನು ಪರೀಕ್ಷಿಸಿ ಅವರು ಈಗಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಎ. ಗುರುರಾಜ್ ರಾವ್ ಎಂಬವರು ನೀಡಿದ ಮಾಹಿತಿಯಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.