ಸುದ್ದಿವಾಹಿನಿಗಳು ಟಿ.ಆರ್.ಪಿಗಾಗಿ ಸಮಾಜವನ್ನು ಇಬ್ಬಾಗ ಮಾಡುತ್ತಿವೆ-ಸುಪ್ರೀಂ ಕೋರ್ಟ್
ನವದೆಹಲಿ ಜ.14 : `ಇತ್ತೀಚಿನ ದಿನಗಳಲ್ಲಿ ಸುದ್ದಿವಾಹಿನಿಗಳು ಟಿ.ಆರ್.ಪಿಗಾಗಿ ಪರಸ್ಪರ ಸ್ಪರ್ಧೆಗೆ ಇಳಿದು, ಸಮಾಜವನ್ನು ಇಬ್ಬಾಗ ಮಾಡುತ್ತಿವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ದೇಶದಾದ್ಯಂತ ದ್ವೇಷ ಭಾಷಣ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರಿದ್ದ ನ್ಯಾಯಪೀಠ, `ಇತ್ತೀಚಿನ ದಿನಗಳಲ್ಲಿ ಸುದ್ದಿವಾಹಿನಿಗಳು ಟಿ.ಆರ್.ಪಿಗಾಗಿ ಪರಸ್ಪರ ಸ್ಪರ್ಧೆಗೆ ಇಳಿದು, ಸಮಾಜವನ್ನು ಇಬ್ಬಾಗ ಮಾಡುತ್ತಿವೆ. ದ್ವೇಷ ಭಾಷಣ ಬಿತ್ತುವ ಅಜೆಂಡಾಗಳಲ್ಲಿ ಟಿ.ವಿ ನಿರೂಪಕರೂ ಭಾಗಿಯಾಗಿರುವುದು ಅಚ್ಚರಿ ಉಂಟುಮಾಡಿದೆ’ ಎಂದಿತು.
`ದ್ವೇಷ ಭಾಷಣ ಅಪಾಯಕಾರಿ, ಅದು ನಿಲ್ಲಲೇಬೇಕು’ ಎಂದು ಹೇಳಿದ ಸುಪ್ರೀಂ ಕೋರ್ಟ್ ಮುದ್ರಣ ಮಾಧ್ಯಮಗಳಂತೆ ದೃಶ್ಯ ಮಾಧ್ಯಮಗಳಿಗೆ ‘ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ’ ಏಕಿಲ್ಲ ಎಂದೂ ಪ್ರಶ್ನಿಸಿತು.