ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಜೀವ ಬೆದರಿಕೆ ಕರೆ
ನವದೆಹಲಿ ಜ.14 : ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರಿಗೆ ಜೀವ ಬೆದರಿಕೆ ಕರೆ ಬಂದಿರುವುದಾಗಿ ವರದಿಯಾಗಿದೆ.
ಸಚಿವ ನಿತಿನ್ ಗಡ್ಕರಿ ಅವರ ಮಹಾರಾಷ್ಟ್ರದ ನಾಗುರದಲ್ಲಿರುವ ಕಚೇರಿಗೆ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದೆ ಎನ್ನಲಾಗಿದ್ದು, ಈ ಕರೆಯಲ್ಲಿ ಗಡ್ಕರಿ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಲಾಗಿದೆ. ಸಚಿವರ ಕಚೇರಿ ದೂರವಾಣಿ ಸಂಖ್ಯೆಗೆ 2 ಬಾರಿ ಕರೆ ಮಾಡಿ ಬೆದರಿಕೆ ಹಾಕಲಾಗಿದ್ದು, ಬೆದಿರಕೆ ಹಿನ್ನಲೆಯಲ್ಲಿ ಸಚಿವರಿಗೆ ಭದ್ರತೆ ಹೆಚ್ಚಿಸಲಾಗಿದೆ ಎಂದು ತಿಳಿದು ಬಂದಿದೆ.