ಕೆಪಿಸಿಸಿ ಕಿಸಾನ್ ಸೆಲ್ ರಾಜ್ಯ ಸಂಚಾಲಕ ಅಕ್ಮಲ್ ಗೆ ಐಟಿ ಶಾಕ್
ಚಿಕ್ಕಮಗಳೂರು ಜ.16 : ಇಂದು ಬೆಳ್ಳಂ ಬೆಳಗ್ಗೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ಕೆಪಿಸಿಸಿ ಕಿಸಾನ್ ಸೆಲ್ ರಾಜ್ಯ ಸಂಚಾಲಕ ಅಕ್ಮಲ್ ಗೆ ಶಾಕ್ ನೀಡಿದ್ದಾರೆ.
ಕೆಪಿಸಿಸಿ ಕಿಸಾನ್ ಸೆಲ್ ರಾಜ್ಯ ಸಂಚಾಲಕ ಅಕ್ಮಲ್ ಅವರ ನಿವಾಸ ಚಿಕ್ಕಮಗಳೂರಿನ ನಿವಾಸ, ಕಚೇರಿ ಮೇಲೆ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದು, ಚಿಕ್ಕಮಗಳೂರಿನ ಷರೀಫ್ ಗಲ್ಲಿಯಲ್ಲಿರುವ ನಿವಾಸ, ಅಕ್ಮಲ್ ಒಡೆತನಕ್ಕೆ ಸೇರಿದ ಕಾಫಿ ಕ್ಯೂರಿಂಗ್ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ.
ಅಧಿಕಾರಿಗಳ ದಾಳಿ ಹಿನ್ನೆಲೆಯಲ್ಲಿ ಅಕ್ಮಲ್ ಮನೆಯ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.