ಪಟಾಕಿಗಳ ನಿಷೇದಿಸುವ ನಿರ್ಧಾರ ಕೈಗೊಳ್ಳುವಂತೆ ಹೈಕೋರ್ಟ್ ದಿಂದ ಸರಕಾರಕ್ಕೆ ಆದೇಶ
ಬೆಂಗಳೂರು: ರಾಜ್ಯದಲ್ಲಿ ಇನ್ನು ಮುಂದೆ ಎಲ್ಲಾ ಬಗೆಯ ಪಟಾಕಿಗಳ ಬಳಕೆ ನಿಷೇಧವಾಗುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಯಾಕೆಂದರೆ ರಾಜ್ಯದಲ್ಲಿ ಎಲ್ಲಾ ಬಗೆಯ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವ ಕುರಿತು ನಿರ್ಧಾರ ಕೈಗೊಳ್ಳುವಂತೆ ರಾಜ್ಯ ಉಚ್ಛ ನ್ಯಾಯಾಲಯ ಸರಕಾರದಕ್ಕೆ ಆದೇಶಿಸಿದೆ.
ಪರಿಸರ ಹಾಗೂ ಸಾರ್ವಜನಿಕರ ಆರೋಗ್ಯದ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಈ ಬಗ್ಗೆ ಮೂರು ತಿಂಗಳ ಒಳಗೆ ನಿರ್ಧಾರ ಕೈಗೊಳ್ಳುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.