ಸುರತ್ಕಲ್; ಇಲೆಕ್ಟ್ರಾನಿಕ್ಸ್ ಮಳಿಗೆಯಲ್ಲಿ ಅಗ್ನಿ ಅವಘಡ ಅಪಾರ ನಷ್ಟ
ಸುರತ್ಕಲ್(ಉಡುಪಿ ಟೈಮ್ಸ್ ವರದಿ) : ಇಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಮಳಿಗೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಸುರತ್ಕಲ್‌ನಲ್ಲಿ ಜ.22ರ ರಾತ್ರಿ ನಡೆದಿದೆ. ನಿನ್ನೆ ರಾತ್ರಿ 11 ಗಂಟೆಯ ಸುಮಾರಿಗೆ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅವಘಡದಿಂದ ಸೊತ್ತುಗಳೆಲ್ಲಾ ಬೆಂಕಿಗೆ ಆಹುತಿಯಾಗಿದೆ. ಘಟನೆಯಿಂದ ಅಪಾರ ನಷ್ಟವೂ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಸುರತ್ಕಲ್ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ, ತನಿಖೆ ನಡೆಸುತ್ತಿದ್ದು, ಶಾರ್ಟ್ ಸರ್ಕ್ಯೂಟ್ ಬೆಂಕಿ ತಗುಲಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.ಇನ್ನು ಸ್ಥಳದಲ್ಲಿ ಅಗ್ನಿ ಶಾಮಕದಳದ 3 ವಾಹನಗಳು ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದೆ. ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.