ಟ್ರಕ್-ಕಾರು ಮುಖಾಮುಖಿ ಡಿಕ್ಕಿ-9 ಮಂದಿ ಸ್ಥಳದಲ್ಲೇ ಮೃತ್ಯು

ಮುಂಬೈ ಜ.19 : ಟ್ರಕ್ ಮತ್ತು ಕಾರು ಮುಖಾಮುಖಿಯಾಗಿ ಡಿಕ್ಕಿ ಹೊಡೆದು 9 ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಗೋವಾ-ಮುಂಬೈ ಹೆದ್ದಾರಿಯಲ್ಲಿ ಇಂದು ನಸುಕಿನ ವೇಳೆ ನಡೆದಿದೆ.

ಸಂಬಂಧಿಕರೊಬ್ಬರು ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ಮುಂಬೈಗೆ ತೆರಳಿದ್ದವರು ಕಾರಿನಲ್ಲಿ ಮುಂಬೈ-ಗೋವಾ ಹೆದ್ದಾರಿಯ ಮೂಲಕ ಗೋವಾದ ರತ್ನಗಿರಿಗೆ ಹಿಂದಿರುಗುತ್ತಿದ್ದರು. ಈ ವೇಳೆ ಇಂದು ನಸುಕಿನ 5 ಗಂಟೆ ಸುಮಾರಿಗೆ ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಮಂಗಾವ್ ತಾಲೂಕಿನ ರೆಪೆÇೀಳಿ ಗ್ರಾಮದ ಸಮೀಪ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಮಹಿಳೆಯರು ಮತ್ತು ಐವರು ಪುರುಷರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ದುರ್ಘಟನೆಯಲ್ಲಿ 4 ವರ್ಷದ ಮಗು ಪವಾಡಸದೃಢ ರೀತಿಯಲ್ಲಿ ಅಪಾಯದಿಂದ ತಪ್ಪಿಸಿಕೊಂಡಿದೆ. ಮಗುವಿಗೆ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಗೋರೆಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Leave a Reply

Your email address will not be published. Required fields are marked *

error: Content is protected !!