ಸಿಎಂ ತವರು ಜಿಲ್ಲೆಯಲ್ಲಿ ಕಾನೂನು ವ್ಯವಸ್ಥೆ ಇಲ್ಲವೆ? ಯು ಟಿ ಖಾದರ್ ಆಕ್ರೋಶ

ಮಂಗಳೂರು: ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಪ್ರಮಾಣದ ಸ್ಪೋಟ ಸಂಭವಿಸಿದ ವಿಚಾರಕ್ಕೆ ಸಂಬಂಧಿಸಿ ಮಾಜಿ ಸಚಿವ ಯುಟಿ ಖಾದರ್ ಅವರು ಸಿಎಂ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಸ್ಪೋಟಕ ಸಾಗಿಸುವವರನ್ನು ಹಿಡಿಯುವುದು ಬಿಟ್ಟು, ಜನ ಸಾಮಾನ್ಯರ ಮರಳು ಗಾಡಿಯನ್ನ ವಶಪಡಿಸಿಕೊಳ್ಳತ್ತಾರೆ ಯಾಕೆ ಸಿಎಂ ತವರು ಜಿಲ್ಲೆಯಲ್ಲಿ ಕಾನೂನು ವ್ಯವಸ್ಥೆ ಇಲ್ಲವೆ? ಎಂದು ಪ್ರಶ್ನಿಸಿದ್ದಾರೆ.

ಘಟನೆಯಿಂದ ಜನಸಾಮಾನ್ಯರ ಮನೆಗಳು ಹಾಳಾಗಿವೆ. ಮುಂದಿನ ದಿನಗಳಲ್ಲಿ ಶಿವಮೊಗ್ಗ ಜಿಲ್ಲೆ ಜನರ ಜೀವನದ ಮೇಲೆ ಗಣಿಗಾರಿಕೆ ಪರಿಣಾಮ ಬೀರಲಿದೆ ಎಂದಿರುವ ಅವರು, ಮನೆ ಹಾಳದವರಿಗೆ ಕೂಡಲೇ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಅಲ್ಲದೆ, ಗಣಿಗಾರಿಕೆ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕು ಎಂದ ಅವರು, ಲಾರಿಯಲ್ಲಿ ಸ್ಪೋಟಕ ವಸ್ತು ಸಾಗಾಟ ಮಾಡುವುದು ಅಧಿಕಾರಿಗಳಿಗೆ ಗೊತ್ತಿಲ್ಲವೇ? ಯಾಕೆ ಸರಕಾರ ಇದರ ಬಗ್ಗೆ ತನಿಖೆ ಮಾಡಲು ಹಿಂದೇಟು ಹಾಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

error: Content is protected !!