ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ: ಟ್ವಿಟರ್ ನಲ್ಲಿ ಸಿದ್ದರಾಮಯ್ಯರಿಂದ #ನ್ಯಾಯಬೇಕು_ಮೋದಿ ಅಭಿಯಾನ
ಯಾದಗಿರಿ ಜ.19 : ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುವ ಸಲುವಾಗಿ ಇಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ ಬೆನ್ನಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟ್ವಿಟರ್ ನಲ್ಲಿ #ನ್ಯಾಯಬೇಕು_ಮೋದಿ ಹ್ಯಾಶ್ ಟ್ಯಾಗ್ ನಡಿಯಲ್ಲಿ ಅಭಿಯಾನ ಆರಂಭಿಸಿದ್ದಾರೆ.
ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ನೀರಾವರಿ, ಕುಡಿಯುವ ನೀರು ಹಾಗೂ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಸಂಬಂಧಿಸಿದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡಿದ್ದು, ಈ ನಡುವೆ ವಿಧಾನ ಸಭೆ
ಈ ಬಗ್ಗೆ ಸರಣಿ ಟ್ವೀಟ್ ಗಳನ್ನು ಮಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಶೇ.40 ಕಮಿಷನ್ ಪ್ರಕರಣ ಸೇರಿದಂತೆ ರಾಜ್ಯ ಬಿಜಿಪಿ ಸರಕಾರದ ವೈಫಲ್ಯಗಳ ಕುರಿತು ಧ್ವನಿ ಎತ್ತುವಂತೆ ಪ್ರಧಾನಿ ಮೋದಿ ಅವರನ್ನ ಆಗ್ರಹಿಸಿದ್ದಾರೆ.
`ಕೊರೋನ ಕಾಲದಲ್ಲಿ ಸ್ಯಾನಿಟೈಸರ್, ಮಾಸ್ಕ್ ನಿಂದ ಹಿಡಿದು ವೆಂಟಿಲೇಟರ್ ವರೆಗೆ ಎಲ್ಲದರಲ್ಲೂ ರಾಜ್ಯ ಸರ್ಕಾರ ಲೂಟಿ ಮಾಡಿದ್ದರಿಂದ ಕನಿಷ್ಠ 3,000 ಕೋಟಿ ಅವ್ಯವಹಾರ ನಡೆದಿದೆ. ಕೊರೊನಾದಿಂದ ಹಾದಿಯಲ್ಲಿ ಬೀದಿಯಲ್ಲಿ ಸತ್ತವರ ಆತ್ಮಗಳು ನ್ಯಾಯಕ್ಕಾಗಿ ನಿಮ್ಮ ಹಾದಿಯನ್ನೇ ಕಾಯುತ್ತಿವೆ ಮೋದಿ ಅವರೇ’., ”ಪಿ.ಎಸ್.ಐ ನೇಮಕಾತಿ ಹಗರಣದಿಂದ, ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಹಗರಣವೂ ಸೇರಿ ಮೊನ್ನೆ ನಡೆದ ಪಿಡ್ಲ್ಯುಡಿ ಸಹಾಯಕ ಎಂಜಿನಿಯರ್ ನೇಮಕಾತಿ ಹಗರಣದಲ್ಲಿ ಕೆಲಸದಿಂದ ವಂಚಿತರಾದ ಎಲ್ಲಾ ಅರ್ಹರಿಗೆ ನ್ಯಾಯ ಕೊಡಿಸಿ ಮೋದಿಯವರೇ.” ಎಂದು ಆಗ್ರಹಿಸಿದ್ದಾರೆ.