ಮತದಾರರ ಖರೀದಿ ಆರೋಪ: ಸಿಎಂ ಬೊಮ್ಮಾಯಿ, ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ದೂರು
ಬೆಂಗಳೂರು ಜ.25 : 6000 ರೂ. ಹಣದ ಆಮೀಷವೊಡ್ಡಿ ಮತದಾರರನ್ನು ಖರೀದಿಸಲು ಸಂಚು ರೂಪಿಸುತ್ತಿದ್ದಾರೆ ಎಂದು ರಮೇಶ್ ಜಾರಕಿಹೊಳಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಕಾಂಗ್ರೆಸ್ ಪೊಲೀಸರಿಗೆ ದೂರು ನೀಡಿದೆ.
ಈ ಬಗ್ಗೆ ರಾಜ್ಯ ಕಾಂಗ್ರೆಸ್ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡು ಪ್ರತಿ ಮತದಾರರಿಗೆ 6000 ರೂಪಾಯಿ ಲಂಚದ ಬಹಿರಂಗ ಆಮಿಷ ಒಡ್ಡುವ ಮೂಲಕ ಮತದಾರರನ್ನು ಖರೀದಿ ಮಾಡಲು ಸಂಚು ರೂಪಿಸಿರುವ ರಮೇಶ್ ಜಾರಕಿಹೊಳಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ನೇತೃತ್ವದಲ್ಲಿ ತನಿಖೆಗೆ ಕೋರಿ ಹೈ ಗ್ರೌಂಡ್ಸ್ ಠಾಣೆಯಲ್ಲಿ ದೂರು ನೀಡಲಾಯಿತು ಎಂದು ಬರೆದುಕೊಂಡಿದೆ.