ಅಕ್ರಮ ಗಣಿಗಾರಿಕೆಯನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಗಳಿಗೆ ಸೂಚನೆ: ಸಿಎಂ

ಮೈಸೂರು: ಅಕ್ರಮ ಗಣಿಗಾರಿಕೆಯನ್ನು ತಡೆಗಟ್ಟುವ ಸಲುವಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸರಕಾರ ರಾಜ್ಯದ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ.  ಈ ಬಗ್ಗೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ ಅವರು, ರಾಜ್ಯದಲ್ಲಿ ಗಣಿಗಾರಿಕೆಗೂ ಕೂಡಾ ಅವಕಾಶ ನೀಡುವುದು ಅಗತ್ಯ.

ಆದರೆ ಅಕ್ರಮ ಗಣಿಗಾರಿಕೆ ನಡೆಸುವುದನ್ನು ನೋಡಿಕೊಂಡು ಸುಮ್ಮನಿರಲು ಸಾಧ್ಯವಿಲ್ಲ ಆದ್ದರಿಂದ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯದ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.


 ಶಿವಮೊಗ್ಗದಲ್ಲಿ ನಡೆದ ಸ್ಪೋಟ ಕುರಿತಂತೆ ಪ್ರತಿಕ್ರಿಯೆ ನೀಡಿ, ಶಿವಮೊಗ್ಗದಲ್ಲಿ ಆದ ಘಟನೆ ಮನಸ್ಸಿಗೆ ಬಹಳ ಬೇಸರವನ್ನುಂಟು ಮಾಡಿದೆ. ಸ್ಥಳಕ್ಕೆ ನಾನು ಭೇಟಿ ನೀಡುತ್ತೇನೆ ಎಂದು ತಿಳಿಸಿದ ಅವರು, ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರವನ್ನು ವಿತರಿಸಲಾಗುವುದು ಎಂದು ಭರವಸೆ ನೀಡಿದರು.

Leave a Reply

Your email address will not be published. Required fields are marked *

error: Content is protected !!