ಕಾಸರಗೋಡು: ಬಸ್, ಪಿಕಪ್ ನಡುವೆ ಅಪಘಾತ: ಓರ್ವ ಮೃತ್ಯು, ಇನ್ನೋರ್ವ ಗಂಭೀರ

ಕಾಸರಗೋಡು ಜ.30 : ಅಂಬಲತ್ತರ ಪಾರಪಳ್ಳಿಯಲ್ಲಿ ಇಂದು ಬೆಳಿಗ್ಗೆ ಬಸ್ ಮತ್ತು ಪಿಕಪ್ ವಾಹನದ ನಡುವೆ ನಡೆದ ಅಪಘಾತದಲ್ಲಿ ಓರ್ವ ಮೃತಪಟ್ಟು, ಮತ್ತೋರ್ವ ಗಂಭೀರ ಗಾಯಗೊಂಡಿದ್ದಾರೆ.

ಮೃತರನ್ನು ಪನತ್ತಡಿಯ ನಿವಾಸಿ ಯೂಸುಫ್ ಎಂದು ಗುರುತಿಸಲಾಗಿದೆ. ಗಾಯಗೊಂಡ ವ್ಯಕ್ತಿಯನ್ನು ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಹೆಸರು ತಿಳಿದುಬಂದಿಲ್ಲ. ಬಂದಡ್ಕದಿಂದ ತೆರಳುತ್ತಿದ್ದ ಖಾಸಗಿ ಬಸ್ ಮತ್ತು ಪಿಕಪ್ ನಡುವೆ ಈ ಅಪಘಾತ ನಡೆದಿದೆ. ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Leave a Reply

Your email address will not be published. Required fields are marked *

error: Content is protected !!