ನಟ ಅರವಿಂದ್ ಬೋಳಾ‌ರ್ ದ್ವಿಚಕ್ರ ವಾಹನ ಅಪಘಾತ- ಆಸ್ಪತ್ರೆಗೆ ದಾಖಲು

ಮಂಗಳೂರು ಜ.30: ತುಳುನಾಡ ಮಾಣಿಕ್ಯ ಖ್ಯಾತಿಯ ಹಾಸ್ಯ ನಟ ಅರವಿಂದ್ ಬೋಳಾ‌ರ್ ಅವರು ಚಲಾಯಿಸುತ್ತಿದ್ದ ದ್ವಿಚಕ್ರ ವಾಹನ ಸ್ಕಿಡ್ ಆಗಿ ಅಪಘಾತಕ್ಕೀಡಾದ ಘಟನೆ ಇಂದು ಪಂಪ್‌ವೆಲ್ ಬಳಿ ನಡೆದಿದೆ ಎಂದು ವರದಿಯಾಗಿದೆ.

ಅಪಘಾತದಿಂದ ಗಾಯಗೊಂಡ ಅರವಿಂದ್ ಬೋಳಾ‌ರ್ ಅವರನ್ನು ಎನಪೋಯಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗ ಬೇಕಿದೆ.

Leave a Reply

Your email address will not be published. Required fields are marked *

error: Content is protected !!