ಮಂಗಳೂರು: ನಾಪತ್ತೆಯಾಗಿದ್ದ ಯುವತಿ ಪ್ರಿಯಕರನೊಂದಿಗೆ ಠಾಣೆಗೆ ಹಾಜರು

ಮಂಗಳೂರು, ಜ.30 : ನಗರದಲ್ಲಿ ಕೆಲ ಸಮಯದ ಹಿಂದೆ ಕೆಲಕ್ಕೆಂದು ಹೋಗಿ ನಾಪತ್ತೆಯಾಗಿದ್ದ ಯುವತಿ ಇದೀಗ ತನ್ನ ಪ್ರಿಯಕರನೊಂದಿಗೆ ವಿವಾಹವಾಗಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾಳೆ ಎಂದು ವರದಿಯಾಗಿದೆ.

ಕಮಲಾಕ್ಷ ಎಂಬವರ ಪುತ್ರಿ, ನಗರದ ಫೈನಾನ್ಸ್ ಕಂಪನಿಯೊಂದರ ಉದ್ಯೋಗಿ ಶಿವಾನಿ (20) ಕೆಲ ಸಮಯದ ಹಿಂದೆ ನಾಪ್ತೆಯಾಗಿದ್ದಳು. ಬಳಿಕ ತನ್ನ ಪ್ರಿಯಕರನೊಂದಿಗೆ ಮದುವೆಯಾಗಿದ್ದು, ಈ ಜೋಡಿಗಳು ಗೋವಾ, ಮುಂಬೈಗೆ ತೆರಳಿ ಹಣದ ಸಮಸ್ಯೆ ಎದುರಾದಾಗ ಎರಡು ಮೊಬೈಲ್ ಮಾರಿ ಅದರ ಹಣದಿಂದ ಸ್ವಲ್ಪ ಸಮಯ ಕಳೆದಿದ್ದರು.

ಶಿವಾನಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಲವ್ ಜಿಹಾದ್ ಆತಂಕದ ನಡುವೆ ಒಂದುವಾರ ಪತ್ತೆಗೆ ಪ್ರಯತ್ನಿಸಿದ್ದರು. ಈ ನಡುವೆ ಸ್ನೇಹಿತರ ಜತೆ ಸಂಪರ್ಕ ಹೊಂದಿದ್ದನ್ನು ಪತ್ತೆ ಹಚ್ಚಿದ ಪೊಲೀಸರು ಯುಪಿಐ ಹಣವನ್ನು ಹಾಕಿದ ವಿಳಾಸ ಪತ್ತೆ ಮಾಡಿ ಈ ಜೋಡಿಯನ್ನು ಪತ್ತೆ ಹಚ್ಚಿದ್ದರು.

ಜ.24ರಂದು ನಗರದ ಕಂಕನಾಡಿ ಠಾಣೆಯ ಪೊಲೀಸ್ ಆಧಿಕಾರಿಗಳ ಮುಂದೆ ಹಾಜರಾದ ಶಿವಾನಿ ತಾನು ಪ್ರೀತಿಸಿದವನನ್ನು ಸ್ವಯೇಚ್ಚೆಯಿಂದ ಮದುವೆಯಾಗಿದ್ದಾಗಿ ಹೇಳಿಕೆ ನೀಡಿದ್ದು ಪತಿಯೊಂದಿಗೆ ಬಾಳುವುದಾಗಿ ಲಿಖಿತ ಹೇಳಿಕೆ ನೀಡಿದ್ದಾಳೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!