ನಾಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಿಂದ ಬಜೆಟ್ ಮಂಡನೆ

ದೆಹಲಿ ಜ.31 : ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ನಾಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸಲಿದ್ದಾರೆ.

ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಸಂಸತ್ ನ ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ರಾಷ್ಟ್ರಪತಿ ಭಾಷಣದ ಬಳಿಕ ನಿರ್ಮಲಾ ಸೀತಾರಾಮನ್ ಆರ್ಥಿಕ ಸಮೀಕ್ಷೆ ಮಂಡಿಸಲಿದ್ದಾರೆ. ನಾಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಲಿದ್ದಾರೆ. ಜಾಗತಿಕ ಆರ್ಥಿಕ ಹಿಂಜರಿತದ ಕಾರಣದಿಂದಾಗಿ ಹಣಕಾಸು ಸಚಿವರು ವಿತ್ತೀಯ ಕೊರತೆಯನ್ನು ಕಾಪಾಡಿಕೊಳ್ಳುವುದರ ಜೊತೆಗೆ ಜನಪರ ಕಾರ್ಯಸೂಚಿ ನಡುವೆ ಸಮತೋಲನವನ್ನು ಕಂಡುಕೊಳ್ಳಬೇಕಿದೆ. ಉದ್ಯೋಗ ಸೃಷ್ಟಿ, ಮೂಲಸೌಕರ್ಯ, ಉತ್ಪಾದನೆ, ಕೃಷಿ ಮತ್ತು ಇತರ ಪ್ರಮುಖ ಕ್ಷೇತ್ರಗಳಿಗೆ ಸುಧಾರಿತ ಹಣವನ್ನು ಕೇಂದ್ರೀಕರಿಸುವ ನಿರೀಕ್ಷೆಯಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಎರಡನೇ ಅವಧಿಯ ಸರ್ಕಾರ ಕೊನೆಯ ಪೂರ್ಣ ಬಜೆಟ್ ಇದಾಗಿದೆ. ಈ ಹಿನ್ನಲೆ ಸಂಬಳ ಪಡೆಯುವ ನೌಕರರು ಮತ್ತು ಹಿರಿಯ ನಾಗರಿಕರು ಸೇರಿದಂತೆ ಸಾಮಾನ್ಯ ಜನರಿಗೆ ವಿವಿಧ ತೆರಿಗೆ ಪರಿಹಾರ ಕ್ರಮಗಳನ್ನು ಸೀತಾರಾಮನ್ ಘೋಷಿಸುವ ನಿರೀಕ್ಷೆಯಿದೆ. ಇದರ ಜೊತೆಗೆ ಜನರ ನಿರೀಕ್ಷೆಗಳು ಸರ್ಕಾರದಿಂದ ಹೆಚ್ಚಿದೆ.

ಕೊರೊನಾ ಕಾರಣದಿಂದಾಗಿ ಕಳೆದ ಎರಡು ವರ್ಷಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಉದ್ಯೋಗ ನಷ್ಟವಾಗಿದೆ. ಜಾಗತಿಕ ಮಟ್ಟದಲ್ಲಿ ಹಣದುಬ್ಬರದಿಂದ ಮತ್ತಷ್ಟು ಹೊಡೆತ ಬಿದ್ದಿದೆ. ದೇಶದಲ್ಲಿ ಮಾತ್ರವಲ್ಲದೇ ಅಂತರಾಷ್ಟ್ರೀಯ ಮಟ್ಟದಲ್ಲೂ ಭಾರತೀಯರು ಉದ್ಯೋಗ ಕಳೆದುಕೊಂಡಿದ್ದಾರೆ. ಈ ಹಿನ್ನಲೆ ಉದ್ಯೋಗದ ವಿಚಾರದಲ್ಲಿ ಯುವ ವರ್ಗಕ್ಕೆ ಸಾಕಷ್ಟು ನಿರೀಕ್ಷೆಗಳಿವೆ. ಇತ್ತಿಚೆಗೆ ರೋಜ್‍ಗಾರ ಮೇಳೆದ ಮೂಲಕ ಮೋದಿ ಸರ್ಕಾರದ ಇಲಾಖೆಯಲ್ಲಿ ಖಾಲಿ ಇರುವ ಉದ್ಯೋಗ ಭರ್ತಿ ಮಾಡುವ ಪ್ರಯತ್ನ ಮಾಡಿದ್ದರು, ಖಾಸಗಿ ವಲಯದ ನಿರೀಕ್ಷೆ ಹೆಚ್ಚಿದೆ. ಕೊವೀಡ್ ನಿಂದ ಪರಿಸ್ಥಿತಿ ಸುಧಾರಿಸುತ್ತಿರುವ ಹಿನ್ನಲೆ ಈ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡಬಹುದು ಎನ್ನುವ ನಿರೀಕ್ಷೆಗಳಿವೆ.

Leave a Reply

Your email address will not be published. Required fields are marked *

error: Content is protected !!