ಕೊಲ್ಲೂರು: ಮಾದಕ ವಸ್ತು ಸೇವನೆ-ಇಬ್ಬರು ಯುವಕರು ಪೊಲೀಸ್ ವಶಕ್ಕೆ

ಕೊಲ್ಲೂರು ಜ.31 (ಉಡುಪಿ ಟೈಮ್ಸ್ ವರದಿ) : ಮಾದಕ ವಸ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿ ತಾಲೂಕಿನ ಮುದೂರು ಗ್ರಾಮದಲ್ಲಿ ಇಬ್ಬರು ಯುವಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ

ರೆನ್ಸ್ (28), ವಿನೀಶ್ (25) ಪೊಲೀಸರು ವಶಕ್ಕೆ ಪಡೆದ ಯುವಕರು.

ಈ ಬಗ್ಗೆ ಖಚಿತ ಮಾಹಿತಿ ಪಡೆದ ಕೊಲ್ಲೂರು ಠಾಣೆಯ ಪೊಲೀಸರು ಜ.30 ರಂದು ಮುದೂರು ಗ್ರಾಮದ ಮುದೂರು ಮೈದಾನ ಬಳಿ ಅಮಲಿನಲ್ಲಿ ಇದ್ದ ರೆನ್ಸ್ ನನ್ನು ಹಾಗೂ ಮುದೂರುವಿನ ಉದಯನಗರ ಬಳಿ ವಿನೀಶ್ ಎಂಬಾತನನ್ನು ಮಾದಕ ವಸ್ತು ಸೇವಿಸಿರುವ ಅನುಮಾಣದ ಮೇರೆಗೆ ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದರು. ಇವರಿಬ್ಬರ ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ಗಾಂಜಾ ಸೇವಿಸಿರುವುದು ದೃಢಪಟ್ಟಿದ್ದು, ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!