ಮೊಗವೀರರಿಗೆ ರಾಜಕೀಯ ಪ್ರಾತಿನಿಧ್ಯತೆಯೊಂದಿಗೆ ಉನ್ನತ ಸ್ಥಾನಮಾನ ನೀಡಿದರೆ ಸಮಾಜದ ಅಭಿವೃದ್ಧಿ ಸಾಧ್ಯ- ಡಾ.ಜಿ.ಶಂಕರ್

ಉಡುಪಿ ಫೆ.1(ಉಡುಪಿ ಟೈಮ್ಸ್ ವರದಿ): ಸಹಕಾರಿ ಕ್ಷೇತ್ರದಲ್ಲಿನ ಯಶಸ್ವಿ ಸಾಧನೆಗಾಗಿ ಸಹಕಾರ ರತ್ನ ಪುರಸ್ಕೃತ ಯಶ್ ಪಾಲ್ ಎ ಸುವರ್ಣ ಅವರಿಗೆ ಅಭಿನಂದನಾ ಕಾರ್ಯಕ್ರಮ” ಯಶೋಭಿನಂದನ” ಇಂದು ಉಚ್ಚಿಲದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಶಾಲಿನಿ ಡಾ.ಜಿ ಶಂಕರ್ ತೆರೆದ ಸಭಾಂಗಣದಲ್ಲಿ ನಡೆಯಿತು.

ಸಹಕಾರ ರತ್ನ ಯಶ್ ಪಾಲ್ ಎ ಸುವರ್ಣ ಅಭಿನಂದನಾ ಸಮೀತಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಮಂಗಳೂರು ವತಿಯಿಂದ ನಡೆದ ಅಭಿನಂದನಾ ಕಾರ್ಯಕ್ರಮವನ್ನು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಇದರ ಪ್ರವರ್ತಕ ನಾಡೋಜ ಡಾ.ಜಿ ಶಂಕರ್ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಎಲ್ಲಾ ಕ್ಷೇತ್ರದಲ್ಲೂ ಯಶ್ ಪಾಲ್ ಅವರ ಕೊಡುಗೆ ಸಿಗುವಂತಾಗಲಿ. ಅವರು ರಾಜಕೀಯವಾಗಿಯೂ ಉತ್ತಮ ಬೆಳವಣಿಗೆ ಹೊಂದಿ ಅವರಿಗೆ ಇನ್ನಷ್ಟು ಉನ್ನತ ಸ್ಥಾನಮಾನ ಸಿಗುವಂತಾಗಲಿ ಎಂದರು. ಮೊಗವೀರ ಸಮುದಾಯ ಸಂಖ್ಯೆಯಲ್ಲಿ ಹೆಚ್ಚಾಗಿದ್ದರೂ ಸಹ ಇದುವರೆಗೆ ಸೂಕ್ತವಾದ ರಾಜಕೀಯ ಪ್ರಾತಿನಿಧ್ಯ ಇಲ್ಲದೆ ಕೊರಗುತ್ತಿದೆ. ಯಶ್ಪಾಲ್ ಸುವರ್ಣ ಅವರು ರಾಜಕೀಯ, ಸಾಮಾಜಿಕ ಹಾಗೂ ಸಹಕಾರಿ ಕ್ಷೇತ್ರದಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದು ಅವರಿಗೆ ರಾಜಕೀಯ ಪ್ರಾತಿನಿಧ್ಯತೆಯೊಂದಿಗೆ ಉನ್ನತ ಸ್ಥಾನಮಾನ ನೀಡಿದ್ದಲ್ಲಿ ಸಮಾಜದ ಅಭಿವೃದ್ಧಿಯಾಗಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಸರಕಾರದಲ್ಲಿರುವ ಉನ್ನತ ಮಟ್ಟದ ನಾಯಕರು ಗಮನಹರಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಕಟಪಾಡಿಯ ಪಡುಕುತ್ಯಾರುವಿನ ಆನೆಗುಂದಿ ಮಹಾಸಂಸ್ಥಾನ ಮಠದ ಶ್ರೀಮದ್ ಜಗದ್ಗುರು ಅನಂತ ಶ್ರೀ ವಿಭೂಷಿತ ಕಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ ಅವರು ಆಶೀರ್ವಚನ ನೀಡಿದರು.

ಈ ವೇಳೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಅವರು ಮಾತನಾಡಿ, ಯಶ್ ಪಾಲ್ ಸುವರ್ಣ ಅವರು ಸಹಕಾರಿ ಕ್ಷೇತ್ರದಲ್ಲಿ ವಿಶೇಷವಾದ ಸಾಧನೆ ಮಾಡಿ ಈ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಅವರ ಶ್ರದ್ಧೆ, ಕಠಿಣ ಪರಿಶ್ರಮ, ಸಾಧನೆ ಮಾಡುವ ತುಡಿತ ಅವರನ್ನು ಇಷ್ಟೋಂದು ಸಾಧನೆ ಮಾಡಿ ಇಂದು ಸಹಕಾರ ರತ್ನ ಪ್ರಶಸ್ತಿಗೆ ಭಾಜನರಾಗುವಂತೆ ಮಾಡಿದೆ. ಸಹಕಾರಿ ಕ್ಷೇತ್ರ ಇಂದು ಪೈಪೋಟಿಯ ಕ್ಷೇತ್ರವಾಗುತ್ತಿದೆ. ಅವರ ಇನ್ನಷ್ಟು ಸಾಧನೆಗೆ ಎಲ್ಲರೂ ಕೈ ಜೋಡಿಸಬೇಕಿದೆ ಎಂದರು.

25 ವರ್ಷಗಳ ಹಿಂದೆ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿದ್ದ ಅವರು ನೀಡಿದಂತಹ ಜವಾಬ್ದಾರಿಯನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸುತ್ತಾ ಬರುತ್ತಿದ್ದಾರೆ.ಹಿಂದುತ್ವ ಚಟುವಟಿಕೆಯಲ್ಲಿ ಬಹಳ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸಿದವರು ನಂತರದ ದಿನಗಳಲ್ಲಿ ಪಕ್ಷದ ಕಾರ್ಯಚಟುವಟಿಕೆಯಲ್ಲಿ ಯಶಸ್ವಿಯಾಗಿ ಬಾಗವಹಿಸಿದ್ದಾರೆ ಎಂದು ಹೇಳಿದರು.

ಇದೇ ವೇಳೆ ಅವರು ಮೀನುಗಾರರ ರಿಗೆ ಸಹಕಾರ ನೀಡುವ ನಿಟ್ಟಿನಲ್ಲಿ ಬಜೆಟ್ ನಲ್ಲಿ ಮತ್ಸ್ಯ ಸಂಪದ ಯೋಜನೆಯನ್ನು ಸರಕಾರ ಸೇರ್ಪಡೆಗೊಳಿಸಿದೆ ಇದೇ ರೀತಿ ಸರಕಾರದ ಸಹಕಾರದ ಜೊತೆಗೆ ಜಿಲ್ಲೆಯ ಅಭಿವೃದ್ಧಿಗೆ ಎಲ್ಲರೂ ಸೇರಿ ರಾಜ್ಯದಲ್ಲಿ ಉಡುಪಿ ಜಿಲ್ಲೆ ನಂ.1 ಜಿಲ್ಲೆಯಾಗಿ ಮಾಡುವಲ್ಲಿ ಶ್ರಮಿಸಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಸಹಕಾರ ರತ್ನ ಯಶ್ ಪಾಲ್ ಎ ಸುವರ್ಣ ಅಭಿನಂದನಾ ಸಮಿತಿ ಸಮಿತಿಯ ಅಧ್ಯಕ್ಷ ಆನಂದ ಸಿ ಕುಂದರ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಇದರ ನಿಕಟಪೂರ್ವ ಅಧ್ಯಕ್ಷ ದಯಾನಂದ ಕತ್ತಲ್ ಸಾರ್, ಉಡುಪಿ ಶಾಸಕ ರಘುಪತಿ ಭಟ್, ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ, ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಇದರ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಕಿದಿಯೂರು, ರಾಜ್ಯ ಸರಕಾರದ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಉಪಾಧ್ಯಕ್ಷ ಕಿರಣ್ ಕೋಡ್ಗಿ, ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ಇದರ ನಿರ್ದೇಶಕ ದೇವಿ ಪ್ರಸಾದ್ ಶೆಟ್ಟಿ ಬೆಳಪು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಉಡುಪಿ ಸಾಯಿರಾಧ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಮನೋಹರ ಶೆಟ್ಟಿ, ಉಡುಪಿ ಉದ್ಯಮಿ ಆನಂದ ಸಿ ಸುವರ್ಣ, ದೇವಾಡಿಗರ ಸೇವಾ ಸಂಘ ಉಡುಪಿ ಇದರ ಅಧ್ಯಕ್ಷ ಗಣೇಶ್ ದೇವಾಡಿಗ ಬ್ರಹ್ಮಗಿರಿ, ಬಿಜೆಪಿ ಕಾಪು ಮಂಡಲದ ಅಧ್ಯಕ್ಷ ಶ್ರೀಕಾಂತ್ ನಾಯಕ್ ಅಲೆವೂರು, ಮಾಂಡವಿ ರಿಯಲ್ ಎಸ್ಟೇಟ್ ಡೆವಲಪರ್ಸ್ ಇದರ ಆಡಳಿತ ನಿರ್ದೇಶಕ ಜೆರ್ರಿ ವಿನ್ಸೆಂಟ್ ಡಯಾಸ್, ಬಾರ್ಕೂರಿನ ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಕಡಂದಲೆ ಸುರೇಶ್ ಭಂಡಾರಿ, ಉಡುಪಿ ಜಿಲ್ಲಾ ಮರಾಠಿ ಸಮಾಜ ಸೇವಾ ಸಂಘದ ಅಧ್ಯಕ್ಷ ಉಮೇಶ್ ಎ ನಾಯಕ್ ಚೇರ್ಕಾಡಿ.

ಅಭಿನಂದನಾ ಸಮಿತಿಯ ಸಂಚಾಲಕ ಮಂಜುನಾಥ್ ಎಸ್ ಕೆ, ಪ್ರಧಾನ ಕಾರ್ಯದರ್ಶಿ ಕುತ್ಯಾರು ಪ್ರಸಾದ್ ಶೆಟ್ಟಿ, ಸಹ ಸಂಚಾಲಕ ರಾಮಚಂದ್ರ ಕುಂದರ್ ಅವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!