ಉಡುಪಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮೀನು ಕಾರ್ಮಿಕರ ಸಂಘದಿಂದ ಪ್ರತಿಭಟನೆ

ಮಣಿಪಾಲ ಫೆ.1 (ಉಡುಪಿ ಟೈಮ್ಸ್ ವರದಿ) : ಉಡುಪಿ ಜಿಲ್ಲಾ ಮೀನುಗಾರರ ಮತ್ತು ಮೀನು ಕಾರ್ಮಿಕರ ಸಂಘ (ಸಿಐಟಿಯು) ಉಡುಪಿ ನೇತ್ರತ್ವದಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಇಂದು ಮಣಿಪಾಲದ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಮೀನು ಕಾರ್ಮಿಕರಿಗೆ ಕಲ್ಯಾಣ ಮಂಡಳಿ ರಚನೆ ಯಾಗಬೇಕು. ನಿವೇಶನ, ವಸತಿ, ವಿದ್ಯಾರ್ಥಿ ವೇತನ, ಹೆಣ್ಣು ಮಕ್ಕಳಿಗೆ ಮದುವೆ ಸಹಾಯ, 60 ವರ್ಷದ ಬಳಿಕ ಪಿಂಚಣಿ ಯೋಜನೆ ಜಾರಿಯಾಗಬೇಕು. ಎಲ್ಲಾ ಮೀನುಗಾರರಿಗೆ ಬಿಪಿಎಲ್ ಕಾರ್ಡ್ ನೀಡಬೇಕು. ಜೀವನಾವಶ್ಯ ವಸ್ತುಗಳನ್ನು ಕಡಿಮೆ ದರದಲ್ಲಿ ನೀಡಬೇಕು. ಅಪಘಾತದಲ್ಲಿ ಮರಣ ಹೊಂದಿದ್ದಲ್ಲಿ 10 ಲಕ್ಷ ಪಾರಿಹಾರ ಕೊಡಬೇಕು. ಕರಾವಳಿ ಉದ್ದಕ್ಕೂ ಕೇರಳ ಮಾದರಿಯಂತೆ ಶಾಶ್ವತ ತಡೆಗೋಡೆ ನಿರ್ಮಾಣ ಮಾಡಿ ಮಳೆಗಾಲದಲ್ಲಿ ಆಗುವ ಅನಾಹುತಗಳನ್ನು ತಡೆಗಟ್ಟಬೇಕು ಎಂಬ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸ್ಥಳಕ್ಕೆ ಬಂದ ಜಿಲ್ಲಾಧಿಕಾರಿ ಕೂರ್ಮಾ ರಾವ್ ಅವರ ಮುಖಾಂತರ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭ ಪ್ರತಿಭಟನೆಯಲ್ಲಿ ಮೀನುಗಾರರ ಸಂಘದ ಜಿಲ್ಲಾ ಅಧ್ಯಕ್ಷ ರಾದ ಕೆ.ಶಂಕರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕವಿರಾಜ್.ಎಸ್, ಉಪಾಧ್ಯಕ್ಷ ರಾದ ವೆಂಕಟೇಶ್ ಕೋಣಿ, ಮೋಹನ್, ಇಲಿಯಾಸ್, ಅನ್ವರ್ ಕಟಪಾಡಿ, ಉಮಾರ್, ಸೋನುಕನಾಲ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!