ಆಸ್ತಿ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್!!

ಬೆಂಗಳೂರು ಫೆ.2 : ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಹೊಸ ಕಾವೇರಿ 2.0 ತಂತ್ರಾಂಶ ಬಳಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದ್ದು, ಈ ಮೂಲಕ ರಾಜ್ಯದಲ್ಲಿ ಆಸ್ತಿ ಖರೀದಿ, ಮಾರಾಟಗಾರರಿಗೆ ಸರಕಾರ ಸಿಹಿಸುದ್ದಿ ನೀಡಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಕಂದಾಯ ಸಚಿವ ಆರ್. ಅಶೋಕ್ ಅವರು, ಆಸ್ತಿ ಖರೀದಿ, ಮಾರಾಟದ ವೇಳೆ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ದಲ್ಲಾಳಿಗಳ ಹಾವಳಿ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ತ್ವರಿತಗತಿಯಲ್ಲಿ ಸೇವೆ ನೀಡಲು ಕಾವೇರಿ 2.0 ತಂತ್ರಾಂಶ ಅಳವಡಿಸಲು ಕಂದಾಯ ಇಲಾಖೆ ಮುಂದಾಗಿದೆ. ಫೆಬ್ರವರಿ 2 ರಿಂದ ಮೈಸೂರು ಮಂಗಳೂರು, ಬೆಳಗಾವಿ, ರಾಮನಗರ, ಮಂಡ್ಯ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಇದನ್ನು ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ಹಾಗೂ ಹೊಸ ಜಾವೇರಿ 2.0 ತಂತ್ರಾಂಶದಿಂದ ರಚೇರಿಗಳಿಗೆ ಅಲೆದಾಟ ತಪ್ಪಲಿದೆ. ಸರ್ವ ಸಮಸ್ಯೆಯೂ ಬಗೆಹರಿಯಲಿದೆ. ನಕಲಿ ದಾಖಲೆ ಸೃಷ್ಟಿಸುವ ಬ್ರೋಕರ್ ಗಳಿಗೆ ಬ್ರೇಕ್ ಬೀಳಲಿದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!