ಕಾರ್ಕಳ: ಟ್ಯಾಂಕರ್ ಮತ್ತು ಬೈಕ್ ಅಪಘಾತ-ಸವಾರ ಮೃತ್ಯು

ಕಾರ್ಕಳ ಫೆ.2 : ಟ್ಯಾಂಕರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಸವಾರ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಳ ಚೆಕ್ ಪೋಸ್ಟ್ ಬಳಿ ಇಂದು ಮಧ್ಯಾಹ್ನ ನಡೆದಿದೆ.

ಅಪಘಾತದಲ್ಲಿ ಸಹ ಸವಾರೆ ವಿದ್ಯಾರ್ಥಿನಿ ಸಣ್ಣ ಪುಟ್ಟ ಗಾಯದೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದು, ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತಪಟ್ಟ ವಿದ್ಯಾರ್ಥಿ ಮಹಾರಾಷ್ಟ್ರ ಹಾಗೂ ವಿದ್ಯಾರ್ಥಿನಿ ಕೋಲಾರ ಮೂಲದವರಾಗಿದ್ದಾರೆ ಎಂದು ತಿಳಿದು ಬಂದಿದೆ

ಇವರು ಕರಾವಳಿಯ ಆಯುರ್ವೇದ ಮೆಡಿಕಲ್ ಕಾಲೇಜೊಂದರ ವಿದ್ಯಾರ್ಥಿಗಳಾಗಿದ್ದು, ಇಂದು ಹೊರನಾಡು ದೇವಸ್ಥಾನಕ್ಕೆ ಹೋಗಿ ಬರುವ ವೇಳೆ ಅಪಘಾತ ಸಂಭವಿಸಿದೆ. ಕಾರ್ಕಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Leave a Reply

Your email address will not be published. Required fields are marked *

error: Content is protected !!