ಎಎಸ್‌ಐ ಪೊಲೀಸ್ ಅಧಿಕಾರಿ ಪ್ರಕಾಶ್ ರಿಗೆ ರಾಷ್ಟ್ರಪತಿ ಪೊಲೀಸ್ ಪದಕ
ಉಡುಪಿ(ಉಡುಪಿ ಟೈಮ್ಸ್ ವರದಿ): ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕಚೇರಿಯ ಕ್ರೈಂ ರೆಕಾರ್ಡ್ ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಎಸ್‌ಐ ಪೊಲೀಸ್ ಅಧಿಕಾರಿ ಪ್ರಕಾಶ್ ಅವರು ರಾಷ್ಟ್ರಪತಿ ಪೊಲೀಸ್ ಪದಕ ತಮ್ಮ ಮಡಿಲಿಗೇರಿಸಿಕೊಂಡಿದ್ದಾರೆ.
ಇವರು ಬಿ.ಕಾಂ ಪದವೀಧರರಾಗಿದ್ದು, 1993ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡಿದ್ದರು. ಪೊಲೀಸ್ ಇಲಾಖೆಯಲ್ಲಿ ಅಧಿಕಾರಿ ಸ್ವೀಕರಿಸಿದಾಗಿ ನಿಂದಲೂ ಪೊಲೀಸ್ ಇಲಾಖೆಗೆ ಸಂಬಂಧಿಸಿದ ಹಲವಾರು ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ. ಇದರೊಂದಿಗೆ ಅಪರಾಧ ಚಟುವಟಿಕೆಗಳ ದಾಖಲೀಕರಣ, ಅಪಘಾತ ಹಾಗೂ ಆತ್ಮಹತ್ಯೆ ಪ್ರಕರಣಗಳನ್ನು ಸ್ಪಷ್ಟವಾಗಿ ದಾಖಲಿಸುತ್ತಿದ್ದರು.
ಇತ್ತೀಚೆಗೆ ನಡೆದ ಚುನಾವಣೆಯ ಸಂದರ್ಭದಲ್ಲಿಯೂ ತಮ್ಮ ಉತ್ತಮ ಕಾರ್ಯನಿರ್ವಹಣೆಗಾಗಿ ಪ್ರಶಂಸೆಯನ್ನೂ ಪಡೆದುಕೊಂಡಿದ್ದಾರೆ. ಗಂಗೊಳ್ಳಿ, ಬ್ರಹ್ಮಾವರ, ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲವಾರು ಪ್ರಕರಣಗಳನ್ನು ಭೇದಿಸುವಲ್ಲಿ ಸಹಕಾರ ನೀಡಿದ್ದು, ಮಾತ್ರವಲ್ಲದೆ ಪೊಲೀಸ್ ಇಲಾಖೆಯ ವಿವಿಧ ಕಾರ್ಯಾಚರಣೆಗಳಲ್ಲೂ ಯಶಸ್ವಿಯಾಗಿ ಭಾಗವಹಿಸಿ ಅಪರಾಧಿಗಳನ್ನು ಮಟ್ಟಹಾಕುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.