ಮಂಗಳೂರು:ಗಣರಾಜ್ಯೋತ್ಸವ ಬಾಲ ಪುರಸ್ಕಾರ ಪ್ರಶಸ್ತಿಗೆ ರಾಜ್ಯದ ಇಬ್ಬರು ಮಕ್ಕಳು ಆಯ್ಕೆ
ಮಂಗಳೂರು: ಗಣರಾಜ್ಯೋತ್ಸವದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ನೀಡುವ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗೆ ಕರ್ನಾಟಕದ ಇಬ್ಬರು ಮಕ್ಕಳಿಗೆ ಭಾಜನರಾಗಿದ್ದಾರೆ.
ನವೋನ್ವೇಷಣೆ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬನ್ನೂರು ಗ್ರಾಮದ ರಾಕೇಶ್ ಕೃಷ್ಣ ಹಾಗೂ ದೆಹಲಿ ಆರ್ಮಿ ಪಬ್ಲಿಕ್ ಸ್ಕೂಲ್ನಲ್ಲಿ ಕಲಿಯುತ್ತಿರುವ ಬೆಂಗಳೂರಿನ ವೀರ್ ಕಶ್ಯಪ್ ಪ್ರಶಸ್ತಿಗೆ ಆಯ್ಕೆಯಾದ ಇಬ್ಬರು ಕನ್ನಡಿಗ ಮಕ್ಕಳಾಗಿದ್ದಾರೆ.
ಈ ಇಬ್ಬರಿಗೂ ಆವಿಷ್ಕಾರ ವಲಯದಲ್ಲಿ ಬಾಲ ಪುರಸ್ಕಾರ ಪ್ರಶಸ್ತಿ ಲಭಿಸಿದ್ದು, ಇಂದು ವಿಜೇತ ಮಕ್ಕಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು, ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು.
ಸರ್ಕಾರ ಪ್ರತೀ ವರ್ಷ ಬಾಲ ಪ್ರತಿಭೆಗಳನ್ನು ಗುರುತಿಸಿ ಈ ಪ್ರಶಸ್ತಿ ನೀಡುತ್ತಿದ್ದು, ಈ ಬಾಲ ಪುರಸ್ಕಾರ ಪ್ರಶಸ್ತಿಯು ಒಂದು ಪದಕ, 1 ಲಕ್ಷ ರೂ. ನಗದು ಒಳಗೊಂಡಿದೆ. ಈ ಪ್ರಶಸ್ತಿಗೆ ಈ ಬಾರಿ ದೇಶದ ಒಟ್ಟು 32 ಮಕ್ಕಳು ಆಯ್ಕೆಯಾಗಿದ್ದು ಈ ಪೈಕಿ ಇಬ್ಬರು ಮಕ್ಕಳು ಕರ್ನಾಟಕ ಮೂಲದವರಾಗಿದ್ದಾರೆ.