ಉಡುಪಿ: ವಿವಿಧ ಸಂಘಟನೆಗಳ ಆಶ್ರಯದಲ್ಲಿ ಜ. 26 ರಂದು ಬೃಹತ್ ರಕ್ತದಾನ ಶಿಬಿರ ಆಯೋಜನೆ

ಉಡುಪಿ(ಉಡುಪಿ ಟೈಮ್ಸ್ ವರದಿ): ಮೊಗವೀರ ಯುವ ಸಂಘಟನೆಯ ಬೆಳ್ಳಂಪಲ್ಲಿ ಘಟಕ ಹಾಗೂ ಡಾ| ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್, ಉಡುಪಿ, ಕೆ.ಕೃಷ್ಣಮೂರ್ತಿ ಆಚಾರ್ಯ, ಕಿನ್ನಿಮುಲ್ಕಿ ಇವರ ನೇತ್ರತ್ವದಲ್ಲಿ ಹಲವಾರು ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಬ್ರಹತ್ ರಕ್ತದಾನ ಶಿಬಿರ , ಶ್ರೀ ಕೃಷ್ಣ ಮಠ ಪಾರ್ಕಿಂಗ್ ಏರಿಯಾದ ಮಥುರಾ ಕಂಫರ್ಟ್ಸ್ ನಲ್ಲಿ ಜ. 26 ರಂದು ಬೆಳಿಗ್ಗೆ 8 ಗಂಟೆಯಿಂದ 3 ಗಂಟೆ ವರೆಗೆ ನಡೆಯಲಿದೆ.

ಈ ರಕ್ತದಾನ ಶಿಬಿರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನಿಗಳು ಭಾಗವಹಿಸಿ ರಕ್ತದಾನ ಶಿಬಿರವನ್ನು ಯಶಸ್ವಿಗೊಳಿಸುವಂತೆ ಕಿನ್ನಿಮುಲ್ಕಿಯ ಕೆ. ಕೃಷ್ಣಮೂರ್ತಿ ಆಚಾರ್ಯ ಮತ್ತು ಅಮೃತ ಕೃಷ್ಣಮೂರ್ತಿ ಆಚಾರ್ಯ ಅವರು ಕೋರಿಕೊಂಡಿದ್ದಾರೆ

Leave a Reply

Your email address will not be published. Required fields are marked *

error: Content is protected !!