ನಗರದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಉದ್ಘಾಟನೆ

ಉಡುಪಿ ಫೆ.4 (ಉಡುಪಿ ಟೈಮ್ಸ್ ವರದಿ) : ಉಡುಪಿ ವಕೀಲರ ಸಂಘದ ಆಶ್ರಯದಲ್ಲಿ ಮಣಿಪಾಲ ಕೆಎಂಸಿ ಆಸ್ಪತ್ರೆಯ ಸಹಯೋಗದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮತ್ತು ಸ್ವಯಂಪ್ರೇರಿತ ರಕ್ತದಾನ ಶಿಬಿರ ಇಂದು ಉಡುಪಿ ವಕೀಲರ ಸಂಘದ ಕಚೇರಿಯಲ್ಲಿ ನಡೆಯಿತು.

ಶಿಬಿರವನ್ನು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಜೀವನದ ಉದ್ದೇಶ ಸಫಲಗೊಳಿಸಲು ಆರೋಗ್ಯ ಸುಸ್ಥಿತಿಯಲ್ಲಿ ಇರುವುದು ಅಗತ್ಯ. ಇದಕ್ಕಾಗಿ ಕಾಲ ಕಾಲಕ್ಕೆ ಆರೋಗ್ಯ ತಪಾಸಣೆ ಅಗತ್ಯ ಎಂದರು.

ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಈ ಸಂದರ್ಭದಲ್ಲಿ ಮಣಿಪಾಲ ಮಾಹೆಯ ಸಹಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ಹಾಗೂ ಮಣಿಪಾಲ ಕೆಎಂಸಿಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ, ವಕೀಲರ ಸಂಘದ ಅಧ್ಯಕ್ಷ ಬಿ.ನಾಗರಾಜ್, ಪ್ರಧಾನ ಕಾರ್ಯದರ್ಶಿ ರೋನಾಲ್ಡ್ ಪ್ರವೀಣ್ ಕುಮಾರ್, ವಕೀಲ ಮುಹಮ್ಮದ್ ಸುಹಾನ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!