ಸೇಫ್ ಉಡುಪಿ ಯೋಜನೆ: ಸಾರ್ವಜನಿಕರೊಂದಿಗೆ ಪೊಲೀಸರ ಸಭೆ

ಉಡುಪಿ, ಫೆ.4 (ಉಡುಪಿ ಟೈಮ್ಸ್ ವರದಿ) : ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಸೈನ್ ಇನ್ ಸೆಕ್ಯುರಿಟಿ ಸಂಸ್ಥೆಯು ನಗರದಲ್ಲಿ ಅಪರಾಧ ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಂಡಿರುವ ಸೇಫ್ ಉಡುಪಿ ಯೋಜನೆಗೆ ಚಾಲನೆ ನೀಡುವ ನಿಟ್ಟಿನಲ್ಲಿ ಇಂದು ಉಡುಪಿ ಬಡಗಬೆಟ್ಟು ಸೊಸೈಟಿಯ ಜಗನ್ನಾಥ ಸಭಾಭವನದಲ್ಲಿ ಪೊಲೀಸರು ಸಾರ್ವಜನಿಕರೊಂದಿಗೆ ಸಭೆ ನಡೆಸಿದರು.

ಈ ವೇಳೆ ಮಾತನಾಡಿದ ಸೈನ್ ಇನ್ ಸೆಕ್ಯುರಿಟಿ ಸಂಸ್ಥೆಯ ಕೃಷ್ಣ ಅವರು, ನಿಯಂತ್ರಣ ಕೊಠಡಿ ಮಾದರಿಯಲ್ಲಿ ಕಾರ್ಯನಿರ್ವಹಣೆ ನಡೆಸುವ ಈ ಯೋಜನೆಗೆ ಸೇರ್ಪಡೆಗೊಳ್ಳುವ ಸಂಸ್ಥೆ ಹಾಗೂ ಉದ್ದಿಮೆಗಳ ಸಿಸಿಟಿವಿಗಳನ್ನು ರಾತ್ರಿ ಕಾಲದಲ್ಲಿ ಭದ್ರತೆಯ ದೃಷ್ಠಿಯಿಂದ ವೀಕ್ಷಣೆ ನಡೆಸಿ ಯಾವುದೇ ಕಳವು ಹಾಗೂ ಇನ್ನಿತರ ಅವಘಡಗಳ ಬಗ್ಗೆ ಮಾಹಿತಿಯನ್ನು ಆ ಕೂಡಲೇ ನೀಡಿ ಸಂಭವಿಸಬಹುದಾದ ಕೃತ್ಯವನ್ನು ತಡೆಗಟ್ಟಲಾಗುತ್ತದೆ ಎಂದು ಮಾಹಿತಿ ನೀಡಿದರು.

ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಹಾಕೇ ಮಚ್ಚೀಂದ್ರ ನಿರ್ದೇಶನದಲ್ಲಿ ನಡೆದ ಸಭೆಯಲ್ಲಿ ವಿವಿಧ ಉದ್ದಿಮೆದಾರರು, ಸಂಘಸಂಸ್ಥೆಗಳಿಂದ ಅಭಿಪ್ರಾಯಗಳನ್ನು ಪಡೆದುಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಉಡುಪಿ ಡಿವೈಎಸ್ಪಿ ದಿನಕರ್, ಉಡುಪಿ ನಗರ ಠಾಣಾ ಪೊಲೀಸ್ ನಿರೀಕ್ಷಕ ಮಂಜಪ್ಪ, ಉಪನಿರೀಕ್ಷಕ ಮಹೇಶ್ ಹಾಗೂ ನಗರದ ಸೊಸೈಟಿ, ದೇವಸ್ಥಾನ, ಮಸೀದಿ, ಚರ್ಚ್ ಸೇರಿದಂತೆ ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!