ಪ್ರಚೋದನಾಕಾರಿ ಭಾಷಣ-ಬಾಬಾ ರಾಮ್‍ದೇವ್ ವಿರುದ್ಧ ಎಫ್.ಐ.ಆರ್

ಜೈಪುರ, ಫೆ.5 : ಪ್ರಚೋದನಕಾರಿ ಹೇಳಿಕೆ ನೀಡಿರುವ ಆರೋಪದ ಮೇಲೆ ಯೋಗ ಗುರು ಬಾಬಾ ರಾಮ್‍ದೇವ್ ಅವರ ವಿರುದ್ಧ ಎಫ್.ಐ.ಆರ್ ದಾಖಲಿಸಲಾಗಿದೆ.

ಸ್ಥಳೀಯ ನಿವಾಸಿ ಪಥಾಯಿ ಖಾನ್ ನೀಡಿದ ದೂರಿನ ಆಧಾರದ ಮೇಲೆ ಚೌಹಾಟನ್ ಪೆÇಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ. ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆದ ಧರ್ಮಗುರುಗಳ ಸಭೆಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಚೌಹಾತನ್ ಪೊಲೀಸ್ ಠಾಣೆ ಎಸ್.ಎಚ್.ಒ ಭೂತರಾಮ್ ಅವರ ಪ್ರಕಾರ, ಐಪಿಸಿ ಸೆಕ್ಷನ್ 153ಎ (ಧರ್ಮ, ಜನಾಂಗ, ಜನ್ಮ ಸ್ಥಳ, ವಾಸಸ್ಥಳದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷ ಉತ್ತೇಜಿಸುವುದು), 295 ಎ (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯ, ಧಾರ್ಮಿಕ ಭಾವನೆಗಳಿಗೆ ಧಕ್ಕೆ) ಅಡಿ ಪ್ರಕರಣ ದಾಖಲಿಸಲಾಗಿದೆ.

ಫೆಬ್ರವರಿ 2 ರಂದು ನಡೆದ ಧರ್ಮಗುರುಗಳ ಸಭೆಯಲ್ಲಿ, ಹಿಂದೂ ಧರ್ಮವನ್ನು ಇಸ್ಲಾಂ ಮತ್ತು ಕ್ರಿಶ್ಚಿಯನ್ ಧರ್ಮಕ್ಕೆ ಹೋಲಿಸುವಾಗ, ಮುಸ್ಲಿಮರು ಹಿಂದೂ ಮಹಿಳೆಯರನ್ನು ಅಪಹರಿಸುತ್ತಿದ್ದಾರೆ ಮತ್ತು ಭಯೋತ್ಪಾದಕರಾಗುತ್ತಾರೆ. ಹಿಂದೂ ಧರ್ಮವು ತನ್ನ ಅನುಯಾಯಿಗಳಿಗೆ ಒಳ್ಳೆಯದನ್ನು ಮಾಡಲು ಕಲಿಸಿದರೆ ಈ ಎರಡು ಧರ್ಮಗಳು ಮತಾಂತರದ ಗೀಳನ್ನು ಹೊಂದಿದ್ದವು ಎಂದು ರಾಮ್ ದೇವ್ ಆರೋಪಿಸಿದ್ದರು.

Leave a Reply

Your email address will not be published. Required fields are marked *

error: Content is protected !!