ಉತ್ತಮ ಆಡಳಿತ ಕೊಡುವ ಮನೋಭಾವ ಹೊಂದಿದ್ರೆ ಖಾತೆ ಕ್ಯಾತೆ ಬರಲ್ಲ-ಅಂಗಾರ

ಉಡುಪಿ: ರಾಜ್ಯಕ್ಕೆ ಉತ್ತಮ ಆಡಳಿತ ಕೊಡುವ ಮನೋಭಾವ ಹೊಂದಿದ್ರೆ ಖಾತೆ ಕ್ಯಾತೆ ಬರಲ್ಲ ಎಂದು ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾಗಿಗೆ ಸಚಿವ ಎಸ್ ಅಂಗಾರ ಅವರು ಖಾತೆ ಹಂಚಿಕೆಯಿಂದ ಅಸಮಾಧಾನಗೊಂಡಿರುವವರಿಗೆ  ಕಿವಿಮಾತು ಹೇಳಿದ್ದಾರೆ. 

ಉಡುಪಿಯಲ್ಲಿ ಖಾತೆ ಹಂಚಿಕೆ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ  ಮಾತನಾಡಿರುವ ಅವರು, ರಾಜ್ಯದ ಸಮಸ್ಯೆ ಅರಿತು ಸಚಿವರು ಸರ್ಕಾರಕ್ಕೆ ಸಹಕಾರ ಕೊಡಬೇಕು. ಸರ್ಕಾರದ ಒಳಗಿರುವ ಎಲ್ಲರಿಗೂ ಒಂದೇ ರೀತಿ ಆಲೋಚನೆ ಇರಬೇಕು. ನಮ್ಮ ಆಲೋಚನೆಯಲ್ಲಿ ವ್ಯತ್ಯಾಸ ಆದರೆ ರಾಜ್ಯಕ್ಕೆ ಸಮಸ್ಯೆ ಬರುತ್ತದೆ. ಉತ್ತಮ ಆಡಳಿತ ಕೊಡುವ ಮನೋಭಾವನೆ ಇದ್ದರೆ ಖಾತೆ ಕ್ಯಾತೆ ಬರುವುದಿಲ್ಲ ಎಂದರು.  

ನಾನು ಯಾವತ್ತೂ ಅಧಿಕಾರದ ಹಿಂದೆ ಹೋಗಿಲ್ಲ, ಅಧಿಕಾರವೇ ನನ್ನ ಹಿಂದೆ ಬಂದಿದೆ. ಹೀಗಿರುವ ಖಾತೆ ಹಂಚಿಕೆ ಸಮಸ್ಯೆ ಬಗ್ಗೆ ಪಕ್ಷದ ಹಿರಿಯರು ಗಮನ ಕೊಡುತ್ತಾರೆ ಎಂದ ಅವರು, ಈಗಷ್ಟೇ ಮೀನುಗಾರಿಕೆ ಬಂದರು ಒಳನಾಡು ಖಾತೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ

ಕೆಲದಿನಗಳ ಕಾಲ ಕಾರ್ಯವ್ಯಾಪ್ತಿಯ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳುತ್ತೇನೆ. ಮೀನುಗಾರರ ಬೇಡಿಕೆ ಸಮಸ್ಯೆಗಳನ್ನು ಅರಿತುಕೊಂಡು ಅವರ ಹಿತ ಕಾಪಾಡುವ ಕೆಲಸವನ್ನು ಮಾಡುತ್ತೇನೆ. ಬಂದರು ಮೀನುಗಾರರ ಕುಟುಂಬ ಸಮುದ್ರತೀರಕ್ಕೆ ಮುಂದಿನ ದಿನಗಳಲ್ಲಿ ಭೇಟಿಕೊಟ್ಟು ಅನುಭವವನ್ನು ಪಡೆದುಕೊಳ್ಳುತ್ತೇನೆ ಎಂದರು.

Leave a Reply

Your email address will not be published. Required fields are marked *

error: Content is protected !!