ಜ.29: ಎಸ್‌ಎಸ್‌ಎಲ್‌ಸಿ ಕನ್ನಡ ವಿಷಯದ ಕುರಿತು ಫೋನ್ ಇನ್ ಕಾರ್ಯಕ್ರಮ
ಉಡುಪಿ(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಕಲಿಕೆ ಹಾಗೂ ಪರೀಕ್ಷಾ ಫಲಿತಾಂಶದ ಬಲವರ್ಧನೆಗಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಫೋನ್ ಇನ್ ಕಾರ್ಯಕ್ರಮವನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ. ಈ ಫೋನ್ ಇನ್ ಕಾರ್ಯಕ್ರಮದ ಮುಂದಿನ ಭಾಗವಾಗಿ ಕಾರ್ಕಳದ ಬೈಲೂರಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜ. 29 ರಂದು ಸಂಜೆ 5 ಗಂಟೆಯಿಂದ ರಾತ್ರಿ 7 ಗಂಟೆ ವರೆಗೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ಪ್ರಥಮ ಭಾಷೆ ಕನ್ನಡ ವಿಷಯಕ್ಕೆ ಸಂಬಂದಿಸಿ ಫೋನ್ ಇನ್ ಕಾರ್ಯಕ್ರಮದ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಪ್ರಥಮ ಭಾಷೆ ಕನ್ನಡ ವಿಷಯದಲ್ಲಿ ಇರುವ ಕಲಿಕಾ ಸಮಸ್ಯೆಗಳಿಗೆ ಸಂಬಂಧಿಸಿ ಸೂಚಿಸಿದ ದೂರವಾಣಿ ಸಂಖ್ಯೆಗೆ ಕರೆ ಮಾಡಿ ತಮ್ಮ ಪ್ರಶ್ನೆಗಳನ್ನು ಕೇಳಿ ಪರಿಹಾರ ಪಡೆಯಬಹುದಾಗಿದೆ. ಇದರೊಂದಿಗೆ ಪಾಲಕರು, ಸಾರ್ವಜನಿಕರೂ ಸಹ ಪರೀಕ್ಷಾ ಸಿದ್ಧತೆ, ಮತ್ತಿತರ ಶೈಕ್ಷಣಿಕ ಸಮಸ್ಯೆಗಳಿಗೆ ಸಂಬಂಧಿಸಿ ಡಿಡಿಪಿಐ ನಂಬರ್‌ಗೆ ಕರೆ ಮಾಡಿ ತಮ್ಮ ಗೊಂದಲಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ.
ಕರೆ ಮಾಡಬೇಕಾದ ದೂರವಾಣಿ ಸಂಖ್ಯೆಗಳು:
ನಿರ್ಮಲಾ – 94485 48139 , ಸುಪ್ರಿಯಾ – 94810 14917 ಪವಿತ್ರಾ – 91646 92781, ಶಿವಸುಬ್ರಮಣ್ಯ ಭಟ್ – 94826 54861 ಸುಬ್ರಮಣ್ಯ ಉಪಾದ್ಯಾ -94495 92771, ಪ್ರಭಾಕರ ಶೆಟ್ಟಿ – 99011 90252 ಗಣೇಶ ಜಾಲ್ಲೂರು -94812 14438 , ದೇವದಾಸ ಕೆರೆಮನೆ – 9482097051 ರಾಜೀವ್ -82770 61304 , ರಮೇಶ – 94819 76291
ಪರೀಕ್ಷಾ ಸಿದ್ದತೆ ಮತ್ತಿತರ ಪ್ರಶ್ನೆಗಳಿಗಾಗಿ ಕರೆ ಮಾಡಲು : ಎನ್. ಎಚ್.ನಾಗೂರ, ಡಿಡಿಪಿಐ- 94489 99353 ಕಾರ್ಕಳ ಬಿಇಓ ಶಶಿಧರ ಜಿ.ಎಸ್- 94806 95373
ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಇದರ ಉಪನಿರ್ದೇಶಕ ಎನ್‌ಎಚ್ ನಾಗೂರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.