ಹಿರಿಯಡ್ಕ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಹಿರಿಯಡ್ಕ ಫೆ.9 (ಉಡುಪಿ ಟೈಮ್ಸ್ ವರದಿ) : ವಿಷ ಸೇವಿಸಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.

ಕುಕ್ಕೆಹಳ್ಳಿ ಗ್ರಾಮದ ಸುಧಾಕರ ಶೆಟ್ಟಿ (68) ಆತ್ಮಹತ್ಯೆ ಮಾಡಿಕೊಂಡವರು. ಇವರು ವಿಪರೀತ ಮದ್ಯಪಾನ ಮಾಡುವ ಅಭ್ಯಾಸವನ್ನು ಹೊಂದಿದ್ದರು. ಇವರು ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಉಡುಪರ ಬೆಟ್ಟು ಎಂಬಲ್ಲಿಗೆ ದೇವರ ನೇಮೋತ್ಸವ ಕಾರ್ಯಕ್ರಮಕ್ಕೆ ಮನೆಯಿಂದ ಹೋಗಿದ್ದರು. ಆದರೆ ಇಂದು ಬೆಳಿಗ್ಗೆ ಹಾಡಿಯಲ್ಲಿ ವಿಷಾ ಪಾದಾರ್ಥವನ್ನು ಸೇವಿಸಿ ಅತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಈ ಬಗ್ಗೆ ಮೃತರ ಮಗ ರವೀಂದ್ರ ಅವರು ನೀಡಿದ ಮಾಹಿತಿಯಂತೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್‍ಎಸ್‍ಆರ್ ಸೆಕ್ಟರ್- 4, ಬೆಂಗಳೂರು.

Leave a Reply

Your email address will not be published. Required fields are marked *

error: Content is protected !!