ಪಡುಬಿದ್ರೆ: ವ್ಯಕ್ತಿ ಆತ್ಮಹತ್ಯೆ

ಪಡುಬಿದ್ರಿ ಫೆ.11 (ಉಡುಪಿ ಟೈಮ್ಸ್ ವರದಿ) : ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಪು ತಾಲೂಕಿನ ಬಡಾ ಗ್ರಾಮದ ಮುಳ್ಳಗುಡ್ಡೆಯಲ್ಲಿ ನಡೆದಿದೆ.

ಸ್ಥಳೀಯ ನಿವಾಸಿ ಸುಭಾಶ್ ಕುಮಾರ್ (42) ಆತ್ಮಹತ್ಯೆ ಮಾಡಿಕೊಂಡವರು. ಇವರು ಕೆಲಸಕ್ಕೆ ಹೋಗದೇ ಮನೆಯಲ್ಲಿಯೇ ಇದ್ದು, ಈ ಮೊದಲು ವಿಪರೀತ ಮದ್ಯಪಾನ ಮಾಡಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಈ ಬಗ್ಗೆ ಚಿಕಿತ್ಸೆಯನ್ನೂ ಪಡೆದುಕೊಂಡಿದ್ದರು. ಆದರೆ ನಿನ್ನೆ ಜೀವನದಲ್ಲಿ ಜಿಗುಪ್ಸೆಗೊಂಡು ಕಾಪು ತಾಲೂಕಿನ ಬಡಾ ಗ್ರಾಮದ ಮುಳ್ಳಗುಡ್ಡೆಯಲ್ಲಿರುವ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೇಣು ಬಿಗಿದುಕೊಂಡಿದ್ದ ಇವರನ್ನು ಕಂಡ ಮನೆಯವರು ಕೂಡಲೇ ಆಸ್ಪತ್ರೆಗೆ ದಾಖಲಿಸಲು ಕರೆದುಕೊಂಡು ಹೋಗಿದ್ದು ಆಸ್ಪತ್ರೆಯಲ್ಲಿ ಅವರನ್ನು ಪರೀಕ್ಷಿಸಿದ ವೈದ್ಯರು ಸುಭಾಶ್ ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಮೃತರ ಅಣ್ಣ ಮೋಹನ್ ಕುಮಾರ್ ಅವರು ನೀಡಿದ ಮಾಹಿತಿಯಂತೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್‍ಎಸ್‍ಆರ್ ಸೆಕ್ಟರ್- 4, ಬೆಂಗಳೂರು.

Leave a Reply

Your email address will not be published. Required fields are marked *

error: Content is protected !!