ಕಬಡ್ಡಿ ಆಡುವಾಗ ಮೈದಾನದಲ್ಲೇ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು
ಮುಂಬೈ ಫೆ.11 : ಕಬಡ್ಡಿ ಪಂದ್ಯಾವಳಿ ವೇಳೆ ಮೈದಾನದಲ್ಲೇ ವಿದ್ಯಾರ್ಥಿಯೋರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ಮುಂಬೈನ ಮಲಾಡ್ನಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಕೀರ್ತಿರಾಜ್ (20) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಮಲಾಡ್ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶತಾಬ್ದಿ ಆಸ್ಪತ್ರೆಗೆ ಸಾಗಿಸಿದ್ದು, ಹೃದಯಾಘಾತದಿಂದ ಸಾವು ಸಂಭವಿಸಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.





