ಬಂಟ್ವಾಳ: ಧರೆಗೆ ಬಸ್ ಡಿಕ್ಕಿ – ಹೊರಕ್ಕೆಸೆಯಲ್ಪಟ್ಟ ಯುವತಿ ಗಂಭೀರ

ಬಂಟ್ವಾಳ, ಫೆ 11 : ವಿಟ್ಲ ಸಮೀಪದ ಕೆಲಿಂಜ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್‍ವೊಂದು ಧರೆಗೆ ಡಿಕ್ಕಿ ಹೊಡೆದು ಓರ್ವ ಯುವತಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ವಿಟ್ಲದಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಕೆಲಿಂಜ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಧರೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ ನ ಮುಂಭಾಗದ ಗಾಜು ಒಡೆದು ಯುವತಿ ಹೊರಕ್ಕೆ ಎಸೆಯಲ್ಪಟ್ಟಿದ್ದಾರೆ. ಯುವತಿಗೆ ಗಂಭೀರ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಅನೇಕ ಮಂದಿ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳಾಗಿ ಅಪಾಯದಿಂದ ಪಾರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಘಟನೆಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ. ಅತಿಯಾದ ವೇಗ ಮತ್ತು ಓವರ್ ಟೇಕ್ ಮಾಡುವ ಭರದಲ್ಲಿ ಅಪಘಾತ ಸಂಭವಿಸರಬಹುದು ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ ಜಾಯಿಂಟ್ ವೀಲ್ ಕಡಿತಗೊಂಡು ಅಪಘಾತ ಸಂಭವಿಸಿದೆ ಎಂದು ಚಾಲಕ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ವಿಟ್ಲ ಪೋಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!