ಮಂಗಳೂರು: ದುಷ್ಕರ್ಮಿಗಳಿಂದ ಯುವಕನ ಮೇಲೆ ಹಲ್ಲೆ
ಮಂಗಳೂರು: ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಯುವಕನಿಗೆ ಚೂರಿಯಿಂದ ಇರಿದು ಪರಾರಿಯಾದ ಘಟನೆ ಮಂಗಳೂರಿನ ಹೊರವಲಯದ ಕಾಟಿಪಳ್ಳ ಸಮೀಪ ನಿನ್ನೆ ತಡ ರಾತ್ರಿ ನಡೆದಿದೆ.
ಕೃಷ್ಣಾಪುರ ನಿವಾಸಿ ಜಾಬಿರ್ (20) ಚೂರಿ ಇರಿತಕ್ಕೆ ಒಳಗಾದವರು. ತಡರಾತ್ರಿ ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಯುವಕನಿಗೆ ಚೂರಿ ಇರಿದು ಪರಾರಿಯಾಗಿದ್ದಾರೆ. ಘಟನೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಜಾಬಿರ್‌ರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೃತ್ಯಕ್ಕೆ ಕಾರಣ ಇನ್ನು ತಿಳಿದು ಬಂದಿಲ್ಲ. ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.