ಚೆಕ್ ಬೌನ್ಸ್ ಕೇಸ್: ಶಾಸಕ ಎಂ.ಪಿ. ಕುಮಾರಸ್ವಾಮಿ 1.36 ಕೋಟಿ ಪಾವತಿಸಿ, ತಪ್ಪಿದ್ದಲ್ಲಿ ಜೈಲು ಶಿಕ್ಷೆ ಅನುಭವಿಸಿ

ಬೆಂಗಳೂರು ಫೆ.14 : ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ಚೆಕ್ ಬೌನ್ಸ್‌ ಗೆ ಸಂಬಂಧಿಸಿದ ಎಂಟು ಪ್ರತ್ಯೇಕ ಕ್ರಿಮಿನಲ್ ಪ್ರಕರಣಗಳಿಗೆ ಒಟ್ಟು 1.36 ಕೋ.ರೂ. ಗೂ ಹೆಚ್ಚಿನ ಮೊತ್ತವನ್ನು ಪಾವತಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.

ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ’ದ ನ್ಯಾಯಾಧೀಶೆ ಜೆ.ಪ್ರೀತ್ ಅವರು ಈ ಆದೇಶ ನೀಡಿದ್ದು,  1.36 ಕೋಟಿಗೂ ಹೆಚ್ಚಿನ ಮೊತ್ತವನ್ನು ದೂರುದಾರರಿಗೆ ಪಾವತಿಸುವಲ್ಲಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರು ತಪ್ಪಿದಲ್ಲಿ ಪ್ರತಿ ಪ್ರಕರಣದಲ್ಲಿ ತಲಾ ಆರು ತಿಂಗಳ ಸಾದಾ ಜೈಲು ಶಿಕ್ಷೆ ಅನುಭವಿಸುವಂತೆ ತೀರ್ಪು ನೀಡಿದ್ದಾರೆ.

ಕುಮಾರಸ್ವಾಮಿ ಅವರು ವಿವಿಧ ಪ್ರಕರಣಗಳಲ್ಲಿ ಒಟ್ಟು 1,38,65,000 ಮೊತ್ತಕ್ಕೆ ಮರುಪಾವತಿಯ ಚೆಕ್ ನೀಡಿದ್ದರು. ಇದರಲ್ಲಿ 1,36,50,000 ಬಾಕಿ ಉಳಿಸಿಕೊಂಡಿದ್ದರು. ಈ ಕುರಿತಂತೆ ದೂರುಗಳು ಸಲ್ಲಿಕೆಯಾಗಿದ್ದವು.

Leave a Reply

Your email address will not be published. Required fields are marked *

error: Content is protected !!