ಪೋರ್ಚುಗಲ್: 1950 ರಿಂದೀಚೆಗೆ ಕ್ಯಾಥೋಲಿಕ್ ಚರ್ಚ್ ಪಾದ್ರಿಗಳಿಂದ 5,000 ಬಾಲಕಿಯರ ಮೇಲೆ ಅತ್ಯಾಚಾರ-ವರದಿ

ಸಾಂದರ್ಭಿಕ ಚಿತ್ರ

ಲಿಸ್ಟೆನ್ ಫೆ.14 : ಪೋರ್ಚುಗಲ್ ನಲ್ಲಿ 1950 ರಿಂದ ಇಲ್ಲಿಯವರೆಗೆ ಕ್ಯಾಥೋಲಿಕ್ ಚರ್ಚ್ ಪಾದ್ರಿಗಳು ಸುಮಾರು 5,000 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಅಥವಾ ಅತ್ಯಾಚಾರ ನಡೆಸಿದ್ದಾರೆ ಎಂದು ಪೋರ್ಚುಗೀಸ್ ಕ್ಯಾಥೋಲಿಕ್ ಚರ್ಚ್ ಒಕ್ಕೂಟ ನೇಮಿಸಿದ್ದ ಸ್ವತಂತ್ರ ತನಿಖಾ ಆಯೋಗ ಹೇಳಿದೆ.

ಲೈಂಗಿಕ ಕಿರುಕುಳದ ಬಗ್ಗೆ ಪೋರ್ಚುಗೀಸ್ ಕ್ಯಾಥೋಲಿಕ್ ಚರ್ಚ್ ಒಕ್ಕೂಟ ನೇಮಿಸಿದ್ದ ಸ್ವತಂತ್ರ ತನಿಖಾ ಆಯೋಗವು ಲಿಸ್ಟನ್‍ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ಕಳೆದ ಒಂದು ವರ್ಷದಲ್ಲಿ 500 ಸಂತ್ರಸ್ತೆಯರನ್ನು ಪತ್ತೆ ಹಚ್ಚಿ ಅವರ ಹೇಳಿಕೆಗಳನ್ನು ದಾಖಲಿಸಿದ ಆಯೋಗದ ತನಿಖೆ ಪ್ರಕಾರ, ಕ್ಯಾಥೋಲಿಕ್ ಚರ್ಚ್ ಪಾದ್ರಿಗಳು ಪೋರ್ಚುಗಲ್‍ನಲ್ಲಿ 1950 ರಿಂದ ಇಲ್ಲಿಯವರೆಗೆ ಸುಮಾರು 5000 ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ಕಿರುಕುಳ ನಡೆಸಿರುವುದು ಬೆಳಕಿಗೆ ಬಂದಿದೆ. ಈ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.

ಕ್ಯಾಥೋಲಿಕ್ ಚರ್ಚ್‍ಗಳ ಪ್ರಾಬಲ್ಯ ಹೊಂದಿರುವ ಪೋರ್ಚುಗಲ್‍ನಲ್ಲಿ ಸಂತ್ರಸ್ತರು ಆರಂಭದಲ್ಲಿ ಹೇಳಿಕೆ ದಾಖಲಿಸಲು ಮುಂದೆ ಬಂದರಲಿಲ್ಲ. ಬಹುತೇಕ ಪ್ರಕರಣಗಳು ಪೊಲೀಸ್ ಠಾಣೆಯ ಮೆಟ್ಟಿಲೇರಿಲ್ಲ. ಇದು ಭಯಾನಕ ಸಂಗತಿ ಎಂದು ಆಯೋಗ ಹೇಳಿದೆ. ಹಾಗೂ ಕ್ಯಾಥೋಲಿಕ್ ಚರ್ಚ್‍ಗಳಲ್ಲಿ ಮಕ್ಕಳ ಮೇಲಿನ ಲೈಂಗಿಕ ಶೋಷಣೆಯೂ ಕೇವಲ ಪೋರ್ಚುಗಲ್‍ಗೆ ಸಿಮೀತವಾಗಿಲ್ಲ. ಇದು ಕ್ಯಾಥೋಲಿಕ್ ಚರ್ಚ್‍ಗಳ ಪ್ರಭಾವ ಜಾಸ್ತಿ ಇರುವ ಜಗತ್ತಿನ ಇನ್ನೂ ಅನೇಕ ರಾಷ್ಟ್ರಗಳಲ್ಲಿ ಹೆಚ್ಚಾಗಿದೆ ಎಂಬುದು ತನಿಖೆಯಲ್ಲಿ ಗೊತ್ತಾಗಿದೆ.

ಇನ್ನು ಸ್ವತಂತ್ರ ತನಿಖಾ ಆಯೋಗ ನೀಡಿರುವ ಈ ವರದಿಯನ್ನು ನಿಭಾಯಿಸುವುದರಲ್ಲಿ ಜಗತ್ತಿನ ಎಲ್ಲಾ ಕ್ಯಾಥೋಲಿಕ್ ಚರ್ಚ್‍ಗಳ ಮುಖ್ಯ ಪಾದ್ರಿಯಾಗಿರುವ ಪೋಪ್ ಫ್ರಾನ್ಸಿಸ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದೆ ಎಂದು ಸುದ್ದಿ ಸಂಸ್ಥಯೊಂದು ವರದಿ ಮಾಡಿದೆ.

ಈ ಬಗ್ಗೆ ಮಾತನಾಡಿದ ಮಕ್ಕಳ ಮಾನಸಿಕ ತಜ್ಞರೂ ಆಗಿರುವ ಸ್ವತಂತ್ರ ತನಿಖಾ ಆಯೋಗದ ಅಧ್ಯಕ್ಷ ಪೆಡ್ರೊ ಸ್ಟ್ರಚ್ಟ್ ಅವರು, ಮಕ್ಕಳ ಮೇಲಿನ ಲೈಂಗಿಕ ಶೋಷಣೆ ನಿರ್ಲಕ್ಷಿಸುವ ಆಘಾತವು ಪೊರ್ಚುಗಲ್‍ಗೆ ಈಗ ಗೊತ್ತಾಗುತ್ತದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!