5 ಡಿಸಿಸಿ ಬ್ಯಾಂಗಳ ಅವ್ಯವಹಾರದ ಬಗ್ಗೆ ತನಿಖೆ ನಡೆಯುತ್ತಿದೆ: ಸಚಿವ ಎಸ್.ಟಿ.ಸೋಮಶೇಖರ್

ಬೆಂಗಳೂರು, ಫೆ.15 : ರಾಜ್ಯದಲ್ಲಿ ಪತ್ತೆಯಾಗಿರುವ 5 ಡಿಸಿಸಿ ಬ್ಯಾಂಕ್ ಗಳ ಅವ್ಯವಹಾರದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರು ಪರಿಷತ್ ನಲ್ಲಿ ಹೇಳಿದ್ದಾರೆ.

ಪರಿಷತ್‍ನಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ ಸದಸ್ಯ ಟಿ.ಎ.ಶರವಣ ಅವರ ಪ್ರಶ್ನೆಗೆ ಉತ್ತರಿಸಿದ ಅವರು, 5 ಡಿಸಿಸಿ ಬ್ಯಾಂಕ್‍ಗಳ ಅವ್ಯವಹಾರ ಹಿನ್ನೆಲೆಯಲ್ಲಿ ರಾಜ್ಯದ 21 ಡಿಸಿಸಿ ಬ್ಯಾಂಕ್ ಗಳಲ್ಲಿ ನಡೆದಿರಬಹುದಾದ ಅಕ್ರಮಗಳ ಪತ್ತೆಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಶಿವಮೊಗ್ಗ ಡಿಸಿಸಿ ಬ್ಯಾಂಕ್‍ನಲ್ಲಿ ಚಿನ್ನ ತೆಗೆದು ಕಬ್ಬಿಣ ಇಟ್ಟಿದ್ದ ಪ್ರಕರಣ ಸೇರಿದಂತೆ ಧಾರವಾಡ, ವಿಜಯಪುರ, ಬೀದರ್ ಮತ್ತು ಕೋಲಾರ ಡಿಸಿಸಿ ಬ್ಯಾಂಕ್ ಗಳ ವಿವಿಧ ಪ್ರಕರಣಗಳು ತನಿಖೆ ಹಂತದಲ್ಲಿವೆ. ನಬಾರ್ಡ್ ನಿಯಮವನ್ನು ಉಲ್ಲಂಘಿಸಿ ಕೋಲಾರ ಡಿಸಿಸಿ ಬ್ಯಾಂಕ್ ಸ್ವಸಹಾಯ ಸಂಘಗಳಿಂದ ಶೇರು ನಿಧಿ ಸಂಗ್ರಹ ಮಾಡುತ್ತಿದ್ದು, ಅದನ್ನು ಕೂಡಲೇ ನಿಲ್ಲಿಸುವಂತೆ ಬ್ಯಾಂಕ್‍ಗೆ ಸೂಚನೆ ನೀಡಲಾಗಿದೆ. ಜತೆಗೆ ಈ ಸಂಬಂಧ ನೋಟಿಸ್ ಕೂಡಾ ಜಾರಿ ಮಾಡಲಾಗಿದೆ ಎಂದು ತಿಳಿಸಿದರು.

ಹಾಗೂ ನಬಾರ್ಡ್ ರಾಜ್ಯದ ವಿವಿಧ ಡಿಸಿಸಿ ಬ್ಯಾಂಕ್‍ಗಳಲ್ಲಿ ನಡೆಯುತ್ತಿರುವ ಅವ್ಯವಹಾರಗಳನ್ನು ಪತ್ತೆ ಮಾಡುವುದಿಲ್ಲ. ಬದಲಾಗಿ ಇಲಾಖೆ ಮತ್ತು ಲೆಕ್ಕ ಪರಿಶೋಧಕರು ಅವ್ಯವಹಾರಗಳನ್ನು ಪತ್ತೆ ಮಾಡಿ ಅವುಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!