ಉಳ್ಳಾಲದಲ್ಲಿ ತಾಕತ್ತಿದ್ದರೆ ಮುಸ್ಲಿಮೇತರರನ್ನು ಶಾಸಕರನ್ನಾಗಿ ಮಾಡಿ: ಕಲ್ಲಡ್ಕ ಪ್ರಭಾಕರ್ ಭಟ್
ಮಂಗಳೂರು: ಉಳ್ಳಾಲದ ಜನರಿಗೆ ತಾಕತ್ತಿದ್ದರೆ ಮುಸ್ಲಿಮೇತರರನ್ನು ಶಾಸಕರನ್ನಾಗಿ ಮಾಡಿ ಎಂದು ಆರ್ಎಸ್ಎಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಸವಾಲೆಸೆದಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಪಾಕಿಸ್ತಾನದಲ್ಲಿ ಮತ್ತೆ ಮತ್ತೆ ಮುಸ್ಲೀಮರೇ ಶಾಸಕರಾಗುತ್ತಾರೆ. ಇದೇ ಸ್ಥಿತಿ ಉಳ್ಳಾಲದಲ್ಲೂ ಶುರುವಾಗಿದೆ. ಉಳ್ಳಾಲದಲ್ಲಿ ಪದೇ ಪದೇ ಮುಸ್ಲಿಮರು ಶಾಸಕರಾಗುತ್ತಿದ್ದಾರೆ. ಉಳ್ಳಾಲ ಪಾಕಿಸ್ತಾನವಾಗುತ್ತಿದೆಯೇ ಎಂಬ ಭಯ ನಿರ್ಮಾಣವಾಗಿದೆ” ಎನ್ನುವ ಮೂಲಕ ಪುನಃ ಉಳ್ಳಾಲವನ್ನು ಪಾಕಿಸ್ತಾನಕ್ಕೆ ಹೋಲಿಸಿದ್ದಾರೆ.
ಉಳ್ಳಾಲದಲ್ಲಿ ದೇವಸ್ಥಾನ ಮತ್ತು ದೈವಸ್ಥಾನಗಳ ಕಾಣಿಕೆ ಹುಂಡಿಗೆ ಬೇಡದ ವಸ್ತುಗಳನ್ನು ಹಾಕಿ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ಉಂಟಾಗುವ ಕಾರ್ಯ ಮಾಡಲಾಗುತ್ತಿದೆ. ಹಾಗಾಗಿ ನಾವು ಈಗಲೇ ಎಚ್ಚೆತ್ತುಕೊಳ್ಳುವುದು ಒಳಿತು ಎಂದಿದ್ದಾರೆ.
ಈ ಬಗ್ಗೆ ಮಾತು ಮುಂದುವರೆಸಿದ ಅವರು, ವಿಭಜನೆಯಾಗುವ ಮೊದಲು ಭಾರತೀಯರಾಗಿದ್ದ ಪಾಕಿಸ್ತಾನದ ಜನರ ಮಾನಸಿಕತೆಯೂ ವಿಭಜನೆಯ ಬಳಿಕ ಬದಲಾಯಿತು. ಆ ಭೂಮಿ ಕೆಂಪಾಯಿತು. ಹಿಂದೂಗಳಿಗೆ ಬದುಕಲು ಕಷ್ಟವಾಗುವ ಸ್ಥಿತಿ ಅಲ್ಲಿ ನಿರ್ಮಾಣ ಮಾಡಲಾಯಿತು. ಅದೇ ವಾತಾವರಣ ಇಂದು ಉಳ್ಳಾಲದಲ್ಲಿ ಕಾಣುತ್ತಿದೆ” ಎಂದು ಹೇಳಿದ್ದಾರೆ.
Nimma pakshaddli kuda muslim nayakarannu madi