ಗಾಂಧಿ ಜಯಂತಿ: ರಾಜ್ ಘಾಟ್‌ಗೆ ತೆರಳಿ ನಮಸ್ಕರಿಸಿದ ಪ್ರಧಾನಿ ಮೋದಿ

ನವದೆಹಲಿ: ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ ಘಾಟ್ ಗೆ ಭೇಟಿ ನೀಡಿ, ಗಾಂಧಿ ಸಮಾಧಿಗೆ ನಮನ ಸಲ್ಲಿಸಲಿದ್ದಾರೆ. ಭೇಟಿಗೂ ಮುನ್ನ ನಾವು ಗಾಂಧಿ ಜಯಂತಿಯಂದು ಪ್ರೀತಿಯ ಬಾಪುವಿಗೆ ನಮಸ್ಕರಿಸುತ್ತೇವೆ. ಅವರ ಜೀವನ ಮತ್ತು ಉದಾತ್ತ ಆಲೋಚನೆಗಳಿಂದ ಕಲಿಯಬೇಕಾದದ್ದು ಬಹಳಷ್ಟಿದೆ. ಸಮೃದ್ಧ ಮತ್ತು ಸಹಾನುಭೂತಿಯ ಭಾರತವನ್ನು ರಚಿಸುವಲ್ಲಿ ಬಾಪು ಅವರ ಆದರ್ಶಗಳು ನಮಗೆ ಮಾರ್ಗದರ್ಶನ ನೀಡಲಿ ಎಂದಿದ್ದಾರೆ.

” ಲಾಲ್ ಬಹದ್ದೂರ್ ಶಾಸ್ತ್ರಿ ಜೀ ವಿನಮ್ರ ಮತ್ತು ದೃಢವಾಗಿದ್ದ ವ್ಯಕ್ತಿತ್ವದವರು. ಅವರು ಸರಳತೆಯನ್ನು ನಿರೂಪಿಸಿದರು ಮತ್ತು ನಮ್ಮ ರಾಷ್ಟ್ರದ ಕಲ್ಯಾಣಕ್ಕಾಗಿ ಬದುಕಿದರು. ಭಾರತಕ್ಕಾಗಿ ಅವರು ಮಾಡಿದ ಎಲ್ಲ ಸೇವೆಗೂ ಆಳವಾದ ಕೃತಜ್ಞತೆಯೊಂದಿಗೆ ಅವರ ಜಯಂತಿಯಲ್ಲಿ ನಾವು ಅವರನ್ನು ನೆನಪಿಸಿಕೊಳ್ಳುತ್ತೇವೆ” ಎಂದು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಸ್ಮರಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!