ಬೆಂಗಳೂರು: ಮನೆ ಬೀಗ ಒಡೆದು ಚಿನ್ನಾಭರಣ ಕಳವು, ಆರೋಪಿ ಬಂಧನ

ಬೆಂಗಳೂರು: ಮನೆಯೊಂದರ ಬೀಗ ಒಡೆದು ಆಭರಣಗಳನ್ನು ಕಳ್ಳತನ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.   ರೇಣುಕಾ ಪ್ರಸಾದ್ ಬಂಧಿತ ಆರೋಪಿ. ಈತ 2019 ರ ಫೆ.25  ರಂದು  ಬೆಂಗಳೂರಿನ ಕೆ.ಪಿ.ಅಗ್ರಹಾರದ ಚೋಳೂರು ಪಾಳ್ಯದ ಮನೆಯೊಂದರಲ್ಲಿ ಕಳ್ಳತನ ನಡೆಸಿ ಪರಾರಿಯಾಗಿದ್ದ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಕೆ.ಪಿ.ಅಗ್ರಹಾರ ಠಾಣೆ ಪೊಲೀಸರು, ತನಿಖೆ ನಡೆಸಿ ಆರೋಪಿಯೊಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರೆ. ಬಂಧಿತನಿಂದ ಪೊಲೀಸರು 20 ಲಕ್ಷ ರೂ. ಮೌಲ್ಯದ  506 ಗ್ರಾಂ ತೂಕದ ಚಿನ್ನದ ಆಭರಣಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!